Homeಮುಖಪುಟಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಈ ಹಿಂದೆ ಕೂಡಾ ಕೇರಳ ಹೈಕೋರ್ಟ್‌ ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ತಡೆಹಿಡಿದಿತ್ತು.

- Advertisement -
- Advertisement -

ಸಮುದ್ರ ತೀರದಲ್ಲಿರುವ ಮನೆಗಳನ್ನು ನೆಲಸಮಗೊಳಿಸಬೇಕು ಎಂದು ಲಕ್ಷದ್ವೀಪ ಆಡಳಿತ ನೀಡಿದ್ದ ಆದೇಶವನ್ನು ಕೇರಳ ಹೈಕೋರ್ಟ್‌ ಮಂಗಳವಾರ ತಡೆಹಿಡಿದಿದೆ. ಮುಂದಿನ ಆದೇಶ ಬರುವವರೆಗೂ ದ್ವೀಪಗಳ ಕರಾವಳಿಯಲ್ಲಿರುವ ಮನೆಗಳನ್ನು ಧ್ವಂಸಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ತನ್ನ ಕಟ್ಟಡಗಳ ನೆಲಸಮಗೊಳಿಸುವಿಕೆಯ ಬಗ್ಗೆ ನೋಟಿಸ್ ಪಡೆದ ಮಾಲಿಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು, ಎರಡು ವಾರಗಳಲ್ಲಿ ಈ ವಿಷಯದ ಬಗ್ಗೆ ತನ್ನ ಅಫಿಡವಿಟ್ ನೀಡುವಂತೆ ಆಡಳಿತಕ್ಕೆ ನಿರ್ದೇಶಿಸಿದೆ.

ಈ ಹಿಂದೆಯೆ ಹಲವರ ಮನೆಗಳನ್ನು ಧ್ವಂಸ ಮಾಡುವ ಬಗ್ಗೆ ಆಡಳಿತವು ನೋಟಿಸ್ ನೀಡಿತ್ತು. ಅದಕ್ಕಾಗಿ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಆಡಳಿತವು ಅದು ಕೇವಲ ಕರಡು ಸಲಹೆಯಾಗಿದೆ ಎಂದು ತಿಳಿಸಿತ್ತು. ಇದರ ನಂತರ ಸಂತ್ರಸ್ತರು ಮತ್ತೆ ಧ್ವಂಸಗೊಳಿಸುವಿಕೆಯ ಆದೇಶವನ್ನು ಆಡಳಿತದಿಂದ ಪಡೆದಿದ್ದರು, ಹೀಗಾಗಿ ಅವರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಇತ್ತೀಚೆಗೆ ಹೊರಡಿಸಲಾಗಿರುವ ಹೊಸ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರಕ್ಕಿಂತಲೂ ಹೆಚ್ಚಿನ ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಅದು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ | Naanu gauri

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ ಎಂದು ನೋಟಿಸ್ ಹೇಳಿತ್ತು.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಆದರೆ ಅಧಿಕಾರಿಗಳು, “ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಹೇಳುತ್ತಾರೆ.

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ಇದಕ್ಕೂ ಮುನ್ನ, ಕಳೆದ ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

#SaveLakshadweep-ಬಿಜೆಪಿಯ ಧ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?
PC: A.B. Deayou

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...