Homeಮುಖಪುಟಉಗ್ರರ ಗುಂಡಿಗೆ ಮತ್ತೋರ್ವ ಯೋಧ ಬಲಿ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಉಗ್ರರ ಗುಂಡಿಗೆ ಮತ್ತೋರ್ವ ಯೋಧ ಬಲಿ: ಮೃತರ ಸಂಖ್ಯೆ 5ಕ್ಕೆ ಏರಿಕೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿ ಮುಂದುವರಿದಿದೆ. ಭಯೋತ್ಪಾದಕರ ದಾಳಿಗೆ ಮತ್ತೋರ್ವ ಯೋಧ ಮೃತಪಟ್ಟಿದ್ದಾರೆ.

ನಿನ್ನೆಯಿಂದ ಮೃತಪಟ್ಟ ಯೋಧರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಸೈನಿಕರು ಮತ್ತು ಇಬ್ಬರು ಕ್ಯಾಪ್ಟನ್‌ಗಳು ಸೇರಿದ್ದಾರೆ. ಮೃತ ಕ್ಯಾಪ್ಟನ್‌ಗಳ ಪೈಕಿ ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್‌ ಅವರ ಮಗ ಪ್ರಾಂಜಲ್ ಕೂಡ ಒಬ್ಬರು.

ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ. ಉಗ್ರರು ಮತ್ತು ಸೇನಾ ಪಡೆಗಳ ನಡುವೆ ಕಳೆದ 24 ಗಂಟೆಯಿಂದ ಗುಂಡಿನ ಕಾಳಗ ನಡೆಯುತ್ತಿದೆ ಎಂದು ವರದಿಗಳು ಹೇಳಿವೆ.

ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಉಧಂಪುರದಲ್ಲಿರುವ ಸೇನಾ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಸೇನಾ ಸಿಬ್ಬಂದಿ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ನಿನ್ನೆ ಪ್ರಾರಂಭಗೊಂಡ ಸೇನಾ ಕಾರ್ಯಾಚರಣೆ ರಾತ್ರಿ ಸ್ಥಗಿತಗೊಂಡಿತ್ತು. ಇಂದು ಮುಂಜಾನೆ ಮತ್ತೆ ಪ್ರಾರಂಭಗೊಂಡಿದೆ. ಅರಣ್ಯದಲ್ಲಿ ಅಡಗಿರುವ ಉಗ್ರರು ತಪ್ಪಿಸಿಕೊಳ್ಳದಂತೆ ಸೇನಾ ಸಿಬ್ಬಂದಿ ಸುತ್ತುವರಿದಿದ್ದಾರೆ.

ಇದನ್ನೂ ಓದಿ : ಗುರುದ್ವಾರ: ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ; ಪೇದೆಯನ್ನು ಗುಂಡಿಟ್ಟು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...