Homeಮುಖಪುಟತಮಿಳುನಾಡು: ’ನಿವಾರ್’ ನಿವಾರಣೆಯಾಗುವ ಮೊದಲೇ ಬುರೆವಿ ಚಂಡಮಾರುತ ಸಿದ್ದ!

ತಮಿಳುನಾಡು: ’ನಿವಾರ್’ ನಿವಾರಣೆಯಾಗುವ ಮೊದಲೇ ಬುರೆವಿ ಚಂಡಮಾರುತ ಸಿದ್ದ!

’ಡಿಸೆಂಬರ್ 2 ರಂದು ಬುರೆವಿ ಚಂಡಮಾರುತ ತಮಿಳುನಾಡು-ಪುದುಚೇರಿ ತೀರವನ್ನು ತಲುಪುವ ಸಾಧ್ಯತೆಯಿದೆ’

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸಿದ್ದ ನಿವಾರ್ ಚಂಡಮಾರುತ, ತಮಿಳುನಾಡು, ಪುದುಚೇರಿಗಳಲ್ಲಿ ಭಾರಿ ಅನಾಹುತಕ್ಕೆ ಕಾರಣವಾಗಿದೆ. ಹಲವು ಸಾವು ನೋವುಗಳಿಗೆ ಕಾರಣವಾಗಿ ಸರ್ಕಾರದ ಬೊಕ್ಕಸಕ್ಕೆ ಮತ್ತಷ್ಟು ಹೊರೆಯಾಗಿದೆ. ಈ ಹೊಡೆತದಿಂದ ನಿಟ್ಟುಸುರು ಬಿಡುವ ಮೊದಲೇ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಿದ್ದವಾಗಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗಿದ್ದು, ಅದು ದೊಡ್ಡ ಮಟ್ಟಕ್ಕೆ ಬೆಳೆದರೆ, ಡಿಸೆಂಬರ್ 2 ರಂದು ಮತ್ತೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಚಂಡಮಾರುತಕ್ಕೆ ‘ಬುರೆವಿ’ ಎಂದು ಹೆಸರಿಡಲಾಗಿದೆ.

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗಿ ಚಂಡಮಾರುತ ಸೃಷ್ಟಿಯಾಗಲಿದ್ದು, ಅದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ನಿವಾರ್‌ ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ 

“ಬಂಗಾಳದ ಆಗ್ನೇಯ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಪ್ರದೇಶಗಳಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗುವ ಸಾಧ್ಯತೆಯಿದೆ. ಇದು ಮುಂದಿನ 48 ಗಂಟೆಗಳಲ್ಲಿ ಕೇಂದ್ರೀಕರಿಸುತ್ತದೆ ಜೊತೆಗೆ ಮತ್ತಷ್ಟು ತೀವ್ರಗೊಂಡು, ಪಶ್ಚಿಮ ದಿಕ್ಕಿಗೆ ತೆರಳಿ ಡಿಸೆಂಬರ್ 2 ರಂದು ತಮಿಳುನಾಡು-ಪುದುಚೇರಿ ತೀರವನ್ನು ತಲುಪುವ ಸಾಧ್ಯತೆಯಿದೆ ”ಎಂದು ಪ್ರಾಧಿಕಾರ ತಿಳಿಸಿದೆ.

ಆದರೆ ಬುರೆವಿ ಚಂಡಮಾರುತದ ಪ್ರಭಾವ ಎಷ್ಟರಮಟ್ಟಿಗೆ ತ್ರೀವ್ರವಾಗಿರಲಿದೆ ಎಂದು ತಿಳಿದುಬಂದಿಲ್ಲ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಬುರೆವಿ ಚಂಡಮಾರುತ ದುರ್ಬಲವಾಗಿದ್ದರೂ ಕೂಡ ಡಿ. 1 (ನಾಳೆ) ಮತ್ತು 2ರಂದು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಚೆನ್ನೈ, ಕಡಲೂರು, ಚೆಂಗಲ್ಪಟ್ಟು, ವೆಲ್ಲೂರು ಮತ್ತು ನಾಗಪಟ್ಟಣಂ ಸೇರಿದಂತೆ 18 ನಿವಾರ್ ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಜೊತೆಗೆ ನೂರಾರು ಜಾನುವಾರುಗಳನ್ನು ಚಂಡಮಾರುತ ಬಲಿ ಪಡೆದಿದೆ. 2,064 ಮರಗಳು ಧರೆಗುರುಳಿದ್ದು, ಇದರಿಂದ ಇದು ಸುಮಾರು 108 ವಿದ್ಯುತ್ ಪರಿವರ್ತಕಗಳಿಗೆ ಮತ್ತು 2,927 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ಸಿಎಂ ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದ್ದರೇ, ರಾಜ್ಯ ಸರ್ಕಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.


ಇದನ್ನೂ ಓದಿ:ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...