Homeಮುಖಪುಟಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

ಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಶುಕ್ರವಾರ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಸದರಿ ಸಂಸ್ಥೆಯಲ್ಲಿ ಘಟಿಸಿರುವ ನಾಲ್ಕನೇ ಪ್ರಕರಣ ಇದಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಡೆತ್‌ನೋಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದಿನ ಮೂರು ಪ್ರಕರಣಗಳಲ್ಲಿಯೂ ಸಹ ವಿದ್ಯಾರ್ಥಿಗಳು ಡೆತ್‌ನೋಟ್‌ಗಳನ್ನು ಬಿಟ್ಟು ಹೋಗಿದ್ದಾರೆ” ಎಂದು ತನಿಖಾಧಿಕಾರಿಯೊಬ್ಬರು ‘ಹಿಂದೂಸ್ತಾನ್ ಟೈಮ್ಸ್‌’ಗೆ ತಿಳಿಸಿದ್ದಾರೆ.

ಈ ವರ್ಷ ಐಐಟಿ-ಮದ್ರಾಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನಾಲ್ಕನೇ ವಿದ್ಯಾರ್ಥಿ ಪ್ರಕರಣ ಇದಾಗಿದೆ. 2018ರಿಂದ 11 ಪ್ರಕರಣಗಳು ಇಲ್ಲಿ ಘಟಿಸಿವೆ. ಮಾರ್ಚ್ 31ರಂದು ಸಂಶೋಧನಾ ವಿದ್ಯಾರ್ಥಿ ಸಚಿನ್ ಕುಮಾರ್ ಜೈನ್ ಅವರು ತಮ್ಮ ವಾಟ್ಸ್‌ಅಪ್‌ನಲ್ಲಿ “ನನ್ನನ್ನು ಕ್ಷಮಿಸಿ, ಸರಿಯಾಗಿಲ್ಲ. ಸಾಕು” ಎಂದು ಅಪ್‌ಡೇಟ್‌ ಮಾಡಿ ಸಾವಿಗೆ ಶರಣಾಗಿದ್ದರು.

ಮಾರ್ಚ್ 14 ರಂದು ಇನ್ಸ್‌ಟಿಟ್ಯೂಟ್‌ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಫೆಬ್ರವರಿ 13ರಂದು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಐಐಟಿ-ಮದ್ರಾಸ್ ಶುಕ್ರವಾರ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೋಣೆಯಲ್ಲಿ ಮಧ್ಯಾಹ್ನ ನಿಧನರಾಗಿದ್ದಾರೆಂದು ಹಂಚಿಕೊಳ್ಳಲು ದುಃಖವಾಗುತ್ತಿದೆ” ಎಂದಿದೆ.

“ಸಂಸ್ಥೆಯು ತನ್ನದೇ ಆದ ಒಬ್ಬರನ್ನು ಕಳೆದುಕೊಂಡಿದೆ ಮತ್ತು ವೃತ್ತಿಪರ ಸಮುದಾಯವು ಉತ್ತಮ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

“ಪೋಷಕರಿಗೆ ಮಾಹಿತಿ ನೀಡಲಾಗಿದೆ. ಐಐಟಿ ಮದ್ರಾಸ್, ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಪೂರ್ವಭಾವಿಯಾಗಿ ಗುರುತಿಸಲು ಮತ್ತು ಸಹಾಯ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈ ಕ್ರಮಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ” ಎಂದು ಹೇಳಿದೆ.

ಸಂಸ್ಥೆಯು ‘ಹ್ಯಾಪಿನೆಸ್‌ ವೆಬ್‌ಸೈಟ್’ ಅನ್ನು ಪ್ರಾರಂಭಿಸಿದೆ ಮತ್ತು ವಿದ್ಯಾರ್ಥಿಗಳ ಕ್ಷೇಮವನ್ನು ವಿಚಾರಿಸುತ್ತಿದೆ ಎಂದು ಐಐಟಿ-ಎಂ ನಿರ್ದೇಶಕ ವಿ ಕಾಮಕೋಟಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

“ಕೋವಿಡ್ -19ರ ನಂತರ ಕ್ಯಾಂಪಸ್ ಅನ್ನು ಪುನಾರಂಭಿಸಿದಾಗ, ನಮಗೆ ನಾವು ಊಹಿಸಲಾಧ್ಯವಾದಂತಹ ಸಂಖ್ಯೆಯ ದುರದೃಷ್ಟಕರ ಘಟನೆಗಳು ಎದುರಾಗಿವೆ” ಎಂದು ಐಐಟಿ-ಮದ್ರಾಸ್‌ನ 64ನೇ ಇನ್‌ಸ್ಟಿಟ್ಯೂಟ್‌ ದಿನದಂದು ಕಾಮಕೋಟಿ ಹೇಳಿದ್ದರು.

“ವಿದ್ಯಾರ್ಥಿಗಳನ್ನು, ವಿಶೇಷವಾಗಿ ಖಿನ್ನತೆಗೆ ಒಳಗಾದ ಅಥವಾ ಒತ್ತಡಕ್ಕೊಳಗಾದವರನ್ನು ಮೇಲ್ವಿಚಾರಣೆ ಮಾಡಲು ವ್ಯವಸ್ಥೆಯನ್ನು ರೂಪಿಸಬೇಕು. ಈ ವಿಚಾರವಾಗಿ ಶಿಕ್ಷಣ ಸಚಿವಾಲಯ ಕ್ರಮ ವಹಿಸುವಲ್ಲಿ ವಿಫಲವಾಗಿದೆ” ಎಂದು ಹಲವಾರು ಐಐಟಿ ಹಳೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...