Homeಮುಖಪುಟಮಹಾಕುಂಭದಲ್ಲಿ ಮತ್ತೊಂದು ಅವಘಡ; ಝುನ್ಸಿ ಛತ್ನಾಗ್ ಘಾಟ್-ನಾಗೇಶ್ವರ ಘಾಟ್ ಡೇರೆಗಳಿಗೆ ಬೆಂಕಿ

ಮಹಾಕುಂಭದಲ್ಲಿ ಮತ್ತೊಂದು ಅವಘಡ; ಝುನ್ಸಿ ಛತ್ನಾಗ್ ಘಾಟ್-ನಾಗೇಶ್ವರ ಘಾಟ್ ಡೇರೆಗಳಿಗೆ ಬೆಂಕಿ

- Advertisement -
- Advertisement -

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದ ಸೆಕ್ಟರ್ 22 ರಲ್ಲಿರುವ ಝುನ್ಸಿ ಛತ್ನಾಗ್ ಘಾಟ್ ಮತ್ತು ನಾಗೇಶ್ವರ ಘಾಟ್ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಹಲವಾರು ಡೇರೆಗಳು ಬೂದಿಯಾಗಿದ್ದು, ಯಾವುದೇ ಪ್ರಾಣಾಪಾಯದ ಸುದ್ದಿಗಳು ಈವರೆಗೆ ವರದಿಯಾಗಿಲ್ಲ.

“ಚಟ್ನಾಗ್ ಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ 15 ಡೇರೆಗಳಲ್ಲಿ ಇಂದು ಬೆಂಕಿ ಕಾಣಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣ ಕ್ರಮ ಕೈಗೊಂಡು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಎಸ್‌ಡಿಎಂ ಪ್ರಕಾರ, ಇದು ಇಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಡೇರೆಯಾಗಿತ್ತು; ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ” ಎಂದು ಯುಪಿ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಪ್ರಮೋದ್ ಶರ್ಮಾ ಹೇಳಿದ್ದಾರೆ.

ಮೌನಿ ಅಮವಾಸ್ಯೆಯಂದು ಅವ್ಯವಸ್ಥೆ

ಬುಧವಾರ ಮುಂಜಾನೆ ಮಹಾಕುಂಭದ ಸಂಗಮ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಪ್ರಾಣ ಕಳೆದುಕೊಂಡು, 60 ಕ್ಕೂ ಹೆಚ್ಚು ಜನರು ಗಾಯಗೊಂಡರು. ಹಬ್ಬದ ಅತ್ಯಂತ ಮಹತ್ವದ ಸ್ನಾನದ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ಶುಭ ಸಂದರ್ಭದಲ್ಲಿ ಲಕ್ಷಾಂತರ ಯಾತ್ರಿಕರು ಪವಿತ್ರ ಸ್ನಾನ ಮಾಡಲು ಸೇರಿದ್ದಾಗ ಈ ಘಟನೆ ಸಂಭವಿಸಿದೆ.

ದುರಂತಕ್ಕೆ ಕಾರಣವೇನು?

ಬೆಳಗಿನ ಜಾವ 1 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ನಡುವೆ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ಆಗ ಜನರು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಿದರು, ಇದರ ಪರಿಣಾಮವಾಗಿ ಮಾರಕ ನೂಕುನುಗ್ಗಲು ಉಂಟಾಯಿತು.

“ಜನಸಮೂಹದ ಅಗಾಧ ಒತ್ತಡದಿಂದಾಗಿ ಈ ಘಟನೆ ಸಂಭವಿಸಿದೆ. ಬ್ಯಾರಿಕೇಡ್‌ಗಳು ಮುರಿದು ಜನರು ಒಬ್ಬರ ಮೇಲೆ ಒಬ್ಬರು ಬಿದ್ದರು. 90 ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅವರಲ್ಲಿ 30 ಮಂದಿ ಸಾವನ್ನಪ್ಪಿದರು” ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ಹೇಳಿದರು.

ಮೃತರಲ್ಲಿ 25 ಜನರನ್ನು ಗುರುತಿಸಲಾಗಿದೆ, ಇದರಲ್ಲಿ ಕರ್ನಾಟಕದ ನಾಲ್ವರು ಮತ್ತು ಅಸ್ಸಾಂ ಮತ್ತು ಗುಜರಾತ್‌ನ ತಲಾ ಒಬ್ಬರು ಸೇರಿದ್ದಾರೆ. 36 ಗಾಯಗೊಂಡ ವ್ಯಕ್ತಿಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ, ಉಳಿದ ಬಲಿಪಶುಗಳು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಿದ್ದಾರೆ.

ಇದನ್ನೂ ಓದಿ; ಮಹಾ ಕುಂಭ ಕಾಲ್ತುಳಿತ| ವಿವಿಐಪಿ ಪಾಸ್‌ಗಳು ರದ್ದು, ವಾಹನ ಸಂಚಾರದಲ್ಲಿ ಬದಲಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...