Homeಕರ್ನಾಟಕAICCTU ಹೋರಾಟಕ್ಕೆ ಮತ್ತೊಂದು ಜಯ | 12 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಒಪ್ಪಿದ ಸರ್ಕಾರ

AICCTU ಹೋರಾಟಕ್ಕೆ ಮತ್ತೊಂದು ಜಯ | 12 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಒಪ್ಪಿದ ಸರ್ಕಾರ

- Advertisement -
- Advertisement -

ಕಾರ್ಮಿಕ ಸಂಘಟನೆಯಾದ, ‘ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್’ (AICCTU)ದ ಹೋರಾಟಕ್ಕೆ ಮತ್ತೊಂದು ಗೆಲುವು ಸಿಕ್ಕಿದ್ದು, 12,872 ಪೌರಕಾರ್ಮಿಕರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ 2022 ರಲ್ಲಿ 11,000 ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ಖಾಯಂಗೊಳಿಸಿತ್ತು.

AICCTU ಪ್ರಕಾರ, ರಾಜ್ಯದಲ್ಲಿ 33 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿದ್ದಾರೆ. ರಾಜ್ಯ ಹಣಕಾಸು ಇಲಾಖೆ ನೀಡಿದ ಅನುಮೋದನೆಯು ಮತ್ತಷ್ಟು ಹೆಚ್ಚಿನ ಪೌರಕಾರ್ಮಿಕರನ್ನು ಖಾಯಂಗೊಳಿಸಲು ದಾರಿ ಮಾಡಿಕೊಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನ್ಯಾಯಕ್ಕಾಗಿ ಆಗ್ರಹಿಸಿ ಹಲವು ವರ್ಷಗಳಿಂದ ಮುಷ್ಕರ ನಡೆಸಿ ಹೋರಾಟ ನಡೆಸಿದ ಕಾರ್ಮಿಕರಿಗೆ ಸಂದ ಜಯವಾಗಿದೆ, ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ರಾಜ್ಯದ ನಗರದ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ನೇರ ವೇತನ ಪಡೆಯುವ ಪೌರಕಾರ್ಮಿಕರು, ತ್ಯಾಜ್ಯ ವಾಹನಗಳ ಚಾಲಕರು, ಕ್ಲೀನರ್‌ಗಳು, ಲೋಡರ್‌ಗಳು ಮತ್ತು ಮೇಲ್ವಿಚಾರಕರು ಸೇರಿದಂತೆ ಎಲ್ಲಾ ಪೌರಕಾರ್ಮಿಕರನ್ನು ಕೂಡಾ ಖಾಯಂಗೊಳಿಸಬೇಕು” ಎಂದು ಎಐಸಿಸಿಟಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ, ಪೌರಕಾರ್ಮಿಕರು 12,000 ರಿಂದ 17,000 ರೂ.ಗಳವರೆಗೆ ವೇತನ ಪಡೆಯುತ್ತಿದ್ದಾರೆ. ಅವರನ್ನು ಖಾಯಂಗೊಳಿಸುವುದರಿಂದ ಗುತ್ತಿಗೆ ಕಾರ್ಮಿಕರಿಗೆ ನೀಡದ ಪಿಂಚಣಿಯಂತಹ ಸೌಲಭ್ಯಗಳಿಗೆ ಅರ್ಹರಾಗುತ್ತಾರೆ.

2022ರ ಜುಲೈ 1 ರಂದು, ಪೌರಕಾರ್ಮಿಕರನ್ನು ಖಾಯಂಗೊಳಿಸುವಂತೆ ಮತ್ತು ಚಾಲಕರು ಮತ್ತು ಸಹಾಯಕರುಗಳಂತಹ ಇತರ ಗುತ್ತಿಗೆ ಕಾರ್ಮಿಕ ಕನಿಷ್ಠ ಮಾಸಿಕ ವೇತನ 30,000 ರೂ. ಏರಿಸುವಂತೆ ಒತ್ತಾಯಿಸಿ AICCTU ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆಯೋಜಿಸಿತ್ತು.

ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮೂರು ತಿಂಗಳೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಆರಂಭದಲ್ಲಿ ರಾಜ್ಯ ಸರ್ಕಾರವು ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಘೋಷಿಸಿದಾಗ, ಅದರಲ್ಲಿ ಬೆಂಗಳೂರಿನ 3,673 ಪೌರಕಾರ್ಮಿಕರು ಸೇರಿದಂತೆ ರಾಜ್ಯದ 11,133 ಪೌರಕಾರ್ಮಿಕರು ಒಳಗೊಂಡಿದ್ದರು. ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಎಐಸಿಸಿಟಿಯು, “ಇದು ರಾಜ್ಯದ ಪೌರಕಾರ್ಮಿಕರ ಮೂರನೇ ಒಂದು ಭಾಗ ಮಾತ್ರ” ಎಂದು ಹೇಳಿಕೊಂಡಿತ್ತು.

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಸಂಘಟನೆಯು ಮತ್ತೊಂದು ಮುಷ್ಕರವನ್ನು ನಡೆಸಲಿದೆ ಎಂದು 2022ರ ಸೆಪ್ಟೆಂಬರ್‌ನಲ್ಲಿ ಎಐಸಿಸಿಟಿಯು ಎಚ್ಚರಿಸಿತ್ತು.

ಇದನ್ನೂ ಓದಿ: ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...