Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...