Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...