ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ; ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!
Photo Courtesy: The hindu

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಂತರ ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ಗೊಗೋಯ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಗೊಗೋಯ್‌ರವರ ಭಾಷಣವು ಭಾವನಾತ್ಮಕವಾಗಿತ್ತು ಆದರೆ ಅದು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು ಮೇಲ್ನೋಟಕ್ಕೆ ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

30,000 ರೂಪಾಯಿ ಶ್ಯೂರಿಟಿ, ಸಾಕ್ಷ್ಯಗಳನ್ನು ಹಾಳು ಮಾಡದಿರುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು ಮುಂತಾದ ಷರತ್ತುಗಳ ಮೇಲೆ ಎನ್ಐಎ ವಿಶೇಷ ನ್ಯಾಯಾಧೀಶ ಪ್ರಂಜಲ್ ದಾಸ್ ಜಾಮೀನು ನೀಡಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಎನ್ಐಎ ಪ್ರಕರಣದಲ್ಲಿಇನ್ನೂ ಜಾಮೀನು ಸಿಗದೆ ಇರುವ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

“ಚಾಬುವಾದಲ್ಲಿ ದಾಖಲಾದ ಎನ್‌ಐಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗೊಗೊಯ್‌ಗೆ ಜಾಮೀನು ನೀಡಿದೆ. ಆದರೆ ಈ ವರ್ಷದ ಆಗಸ್ಟ್‌ನಲ್ಲಿ ಚಾಂದಮರಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆ ಪ್ರಕರಣದ ಜಾಮೀನು ಅರ್ಜಿ ಅಕ್ಟೋಬರ್ 13 ರಂದು ವಿಚಾರಣೆಗೆ ಬರಲಿದೆ ”ಎಂದು ಗೊಗೋಯ್ ಪರ ವಕೀಲ ಸಂತನು ಬರ್ತಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಸಿಎಎ ವಿರೋಧಿ ಹೋರಾಟದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ನಾಯಕ ಗೊಗೋಯ್ ಅವರನ್ನು ಕಳೆದ ವರ್ಷ ಡಿಸೆಂಬರ್ 12 ರಂದು ಜೊರ್‌ಹಾಟ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಎನ್ಐಎಗೆ ಹಸ್ತಾಂತರಿಸಲಾಯಿತು ಮತ್ತು ಎನ್‌ಐಎ ನ್ಯಾಯಾಲಯವು ಡಿಸೆಂಬರ್ 17 ರಂದು 10 ದಿನಗಳ ಕಸ್ಟಡಿಗೆ ನೀಡಿದ್ದು. ಅದೇ ದಿನ ವಿಚಾರಣೆಗಾಗಿ ಅವರನ್ನು ನವದೆಹಲಿಗೆ ಕರೆದೊಯ್ಯಲಾಗಿತ್ತು.

ಗೊಗೊಯ್ ಅವರನ್ನು ಡಿಸೆಂಬರ್ 25 ರಂದು ಮತ್ತೆ ಗುವಾಹಟಿಗೆ ಕರೆತರಲಾಗಿತ್ತು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಅಸ್ಸಾಂ ಪೊಲೀಸರು ಸಲ್ಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದರು


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here