Homeಮುಖಪುಟಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ...

ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

- Advertisement -
- Advertisement -

ಸಿಎಎ ವಿರೋಧಿ ಆಂದೋಲನದ ವೇಳೆ ನಡೆದ ಹಿಂಸಾಚಾರದಲ್ಲಿ ಅಸ್ಸಾಂನ ರೈಜೋರ್ ದಳ ಪಕ್ಷದ ಶಾಸಕ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಕೈವಾಡವಿದೆ ಎಂದು ಅವರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯವು ಕಠಿಣ ಯುಎಪಿಎ ಮತ್ತು ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಮಂಗಳವಾರ ಆರೋಪಗಳನ್ನು ದಾಖಲಿಸಿದೆ. ಸಿಎಎ ವಿರೋಧಿ ಪ್ರತಿಭಟನೆ 

NIA ವಿಶೇಷ ನ್ಯಾಯಾಧೀಶ ಎಸ್‌.ಕೆ. ಶರ್ಮಾ ಅವರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 18 (ಪಿತೂರಿ) ಮತ್ತು IPC ಸೆಕ್ಷನ್‌ಗಳಾದ 120B (ಅಪರಾಧದ ಪಿತೂರಿ), 153A (ಹಗೆತನದ ಪ್ರಚಾರ), ಮತ್ತು 153B (ರಾಷ್ಟ್ರೀಯ ಏಕೀಕರಣಕ್ಕೆ ಅಪಾಯ) ಅಡಿಯಲ್ಲಿ ಗೊಗೋಯ್ ವಿರುದ್ಧ ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅವರ ವಕೀಲ ಸಾಂತನು ಬೋರ್ತಕೂರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮತ್ತೊಂದೆಡೆ, ಅಖಿಲ್ ಅವರ ಸಹಚರರಾದ ಧೈಜ್ಯಾ ಕೊನ್ವರ್, ಬಿಟ್ಟು ಸೋನೊವಾಲ್ ಮತ್ತು ಮನಶ್ ಕೊನ್ವರ್ ವಿರುದ್ಧ ಯುಎಪಿಎ ಸೆಕ್ಷನ್ 18 ಮತ್ತು ಐಪಿಸಿಯ 120 ಬಿ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

NIA ತನ್ನ ಚಾರ್ಜ್ ಶೀಟ್‌ನಲ್ಲಿ ಅಖಿಲ್ ವಿರುದ್ಧ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿದ್ದಾರೆ ಮತ್ತು ದೇಶದ್ರೋಹ ಮಾಡಿದ್ದಾರೆ ಎಂದು UAPA ಸೆಕ್ಷನ್ 39 ಮತ್ತು  IPC ಸೆಕ್ಷನ್ 124A (ದೇಶದ್ರೋಹ) ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಿಎಎ ವಿರೋಧಿ ಪ್ರತಿಭಟನೆ

ಇದಕ್ಕೆ ಪ್ರತಿಕ್ರಿಯಿಸಿದ ಗೊಗೊಯ್, “ನಾವು ಜನರೊಂದಿಗೆ ಇದ್ದೇವೆ ಎಂಬುದನ್ನು ಇದು ಮತ್ತೊಮ್ಮೆ ಸಾಬೀತುಪಡಿಸುತ್ತದೆ. ಈ ಸರ್ಕಾರವು ನಮ್ಮನ್ನು ಜೈಲಿನೊಳಗೆ ಇರಿಸಲು ಬಯಸುತ್ತದೆ. ಫ್ಯಾಸಿಸ್ಟ್ ಮತ್ತು ಕೋಮುವಾದಿ ಸರ್ಕಾರದ ವಿರುದ್ಧದ ಹೋರಾಟವು ತುಂಬಾ ಕಷ್ಟಕರವಾಗಿದ್ದು, ದುಬಾರಿ ವ್ಯವಹಾರವಾಗಿದೆ.” ಎಂದು ಹೇಳಿದ್ದಾರೆ.

ನಾವು ನಾಲ್ವರೂ ನಮ್ಮ ವಿರುದ್ಧ ಆರೋಪಗಳನ್ನು ರೂಪಿಸುವುದರ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಮೊರೆ ಹೋಗಲಿದ್ದೇವೆ ಎಂದು ಅಖಿಲ್ ಗೊಗೋಯ್ ಅವರು ಹೇಳಿದ್ದಾರೆ.

ಡಿಸೆಂಬರ್ 2019 ರಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಪಾತ್ರ ಇದೆ ಎಂದು ಎನ್‌ಐಎ 2 ಪ್ರಕರಣಗಳನ್ನು ದಾಖಲಿಸಿದ್ದು, ಅವರ ವಿರುದ್ಧ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...