Homeಮುಖಪುಟಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

- Advertisement -
- Advertisement -

ರಾಜ್ಯದ ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಮತೀಯ ಗೂಂಡಾಗಿರಿಗಳಿಗೆ ಕಡಿವಾಣ ಹಾಕಲು ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದರು. ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ನೂತನ ಪಡೆಯಾದ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸುವ ಅಗತ್ಯವಿದೆ ಎಂದು ಮಂಗಳೂರಿಗೆ ಭೇಟಿ ನೀಡಿದ ವೇಳೆ ಹೇಳಿದ್ದರು. ಅದೀಗ ಕಾರ್ಯರೂಪಕ್ಕೆ ಬಂದಾಂತಾಗಿದೆ.

ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾಚರಣೆ ನಡೆಸಲಿದೆ ಎಂದು ಕುಲದೀಪ್ ಕುಮಾರ್​ ಜೈನ್ ಹೇಳಿದ್ದಾರೆ.

“ಮಂಗಳೂರು ನಗರದ ಸಿಸಿಬಿ ಎಸಿಪಿ ಉಸ್ತುವಾರಿಯಲ್ಲಿ “ಆ್ಯಂಟಿ‌ ಕಮ್ಯುನಲ್ ವಿಂಗ್” ತಂಡ ರಚನೆ ಮಾಡಲಾಗಿದ್ದು, ನಗರದಲ್ಲಿ ನಡೆಯಬಹುದಾದ ಅನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು ಇದರ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು, ನೈತಿಕ ಪೊಲೀಸ್‌ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಈ ವಿಂಗ್‌ ಪರಿಶೀಲನೆ ನಡೆಸಲಿದೆ. ಅವುಗಳಲ್ಲಿನ ಆರೋಪಿತರ ಚಲನವಲನಗಳ ಬಗ್ಗೆ ನಿತ್ಯ ನಿಗಾವಹಿಸುವುದು, ಅವರ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದು, ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿರುವ ಎಲ್ಲ ಸಂಘಟನೆಗಳ ಬಗ್ಗೆ ಮಾಹಿತಿಯನ್ನು ಆ್ಯಂಟಿ‌ ಕಮ್ಯುನಲ್ ವಿಂಗ್ ಸಂಗ್ರಹ ಮಾಡಲಿದೆ” ಎಂದು ಅವರು ಮಾಹಿತಿ ನೀಡಿದರು.

ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡಿದ್ದರು. ಅದಾದ ನಂತರ ಸಾಲು ಸಾಲು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿದ್ದವು. ಆ ಹಿನ್ನೆಲೆಯಲ್ಲಿ ಅವುಗಳಿಗೆ ಕಡಿವಾಣ ಹಾಕಬೇಕೆಂಬ ಕೂಗು ಜೋರಾಗಿ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ; ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಯುವಕನನ್ನು ಅರೆಬೆತ್ತಲೆಗೊಳಿಸಿ ತೀವ್ರ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...