Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು ನೀಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿದೆ. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದಾರೆ. ಸಂಸ್ಥೆಯ ಮುಖ್ಯಸ್ಥರೂ ಈ ಸಂಬಂಧ ಒಪ್ಪಿಕೊಂಡಿರುವುದಾಗಿ ಸಮಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದೆ.

“ಈ ಸ್ಪರ್ಧೆಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವುದು ಮತ್ತು ಇಂದು (ಜ.25) ಇದೇ ವಿಷಯದ ಮೇಲೆ ಶಾಲೆಯಲ್ಲಿ ಚರ್ಚಾ ಸ್ಪರ್ಧೆಗೆ ತಯಾರಿ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ಸಮಿತಿಯು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಇಲ್ಲಿ ನೀಡಿರುವ ಚರ್ಚಾ ವಿಷಯವು ನೇರವಾಗಿ ನಮ್ಮ ಭಾರತದ ಸಂವಿಧಾನವನ್ನು ಅವಮಾನಿಸುವ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಕೆಟ್ಟ ಅಭಿಪ್ರಾಯ, ಅಪನಂಬಿಕೆ, ದ್ವೇಷಭಾವನೆ ಮೂಡಿಸುವ ದುರುದ್ದೇಶ ಹೊಂದಿರುವುದು ನೇರವಾಗಿ ಕಂಡು ಬಂದಿದೆ” ಎಂದು ಸಮಿತಿ ಆರೋಪಿಸಿದೆ.

“ಸಂವಿಧಾನವನ್ನು ಅವಮಾನಿಸುವುದೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ದೇಶದ್ರೋಹದ ಕೆಲಸ ಮಾಡಿರುವ ಸಂವಿಧಾನ ವಿರೋಧಿಯಾದ ಶಾಲೆಯನ್ನು ಈ ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕು. ಇದು ಭಾರತದ ಸಂವಿಧಾನ ವಿರೋಧಿ ಶಾಲೆ ಎಂದು ಘೋಷಿಸಿ, ಶಾಲೆಯ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

“ಈ ಕೃತ್ಯಕ್ಕೆ ಒಪ್ಪಿಗೆ ಸೂಚಿಸಿರುವ  ಮುಖ್ಯೋಪಾಧ್ಯಾಯರು /ಪ್ರಾಂಶುಪಾಲರನ್ನು, ವಿಷಯ ಕೊಟ್ಟ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು. ಮುಂದೆ ಅವರು ಯಾವ ಶಿಕ್ಷಣ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಲು ಅನರ್ಹರೆಂದು ಘೋಷಿಸಬೇಕು. ಇವರೊಂದಿಗೆ ಶಾಲೆಯ ಆಡಳಿತ ಮಂಡಳಿಯವರ ಮೇಲೆ ದೇಶದ್ರೋಹದ ಅಡಿಯಲ್ಲಿ ಕ್ರಿಮಿನಲ್‌‌ ಕೇಸು ದಾಖಲಿಸಬೇಕು. ಈ ಮೂಲಕ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರ್ಕಾರವು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಲಾಗಿದೆ.

ಭಾರತ ಸಂವಿಧಾನದ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನಗಳು ನಡೆದಿದ್ದು, ಈ ಕುರಿತು ಸರ್ಕಾರ ಸೂಕ್ತ ಆದೇಶ ಹೊರಡಿಸಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾಲೇಜುಗಳ ಮುಖ್ಯಸ್ಥರುಗಳಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಮುಖಂಡರಾದ  ಹ.ರಾ.ಮಹೇಶ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅವರು ಸಂಬಂಧಪಟ್ಟ ಡಿಡಿಪಿಐಗೆ ಅವರು ಸೂಚನೆ ನೀಡಿದ್ದಾರೆ. ಡಿಡಿಪಿಐ, ಬಿಇಒಗೆ ದೂರು ವರ್ಗಾಯಿಸಿದ್ದಾರೆ. ಬಿಇಒಗಳ ಒಂದು ಸಮಿತಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ತಿಳಿದುಬಂದಿದೆ” ಎಂದು ಮಾಹಿತಿ ನೀಡಿದರು.

“ಸದರಿ ಶಾಲೆಯು ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಗೆ ಬರಲಿದೆ. ರಾಮನಗರ ಎಸ್‌ಪಿಯವರಿಗೂ ದೂರು ನೀಡಲಾಗುವುದು. ಸಂವಿಧಾನಕ್ಕೆ ಅಪಚಾರ ಎಸಗುವಂತಹ ವಿಷಯವನ್ನು ಚರ್ಚೆಸ್ಪರ್ಧೆಗೆ ನೀಡಿದ್ದು ನಿಜವೆಂದು ಶಾಲೆ  ಒಪ್ಪಿಕೊಂಡಿದೆ. ಅಷ್ಟಕ್ಕೆ ನಾವು ಬಿಡುವುದಿಲ್ಲ. ಶಾಲೆಯ ಉದ್ದೇಶವೇ ತಪ್ಪಿರುವುದರಿಂದ ಇಡೀ ಶಾಲೆಯ ಪರವಾನಗಿ ರದ್ಧತಿಗೆ ಹೋರಾಡುತ್ತೇವೆ. ಏಕೆಂದರೆ ಅವರು ಮಕ್ಕಳ ಎದೆಯಲ್ಲಿ ವಿಷ ಬಿತ್ತುವ ಯತ್ನವನ್ನು ಈ ಶಾಲೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ ಈ ಸಂಬಂಧ ದೂರು ಬಂದಿರುವುದಾಗಿ ಖಚಿತಪಡಿಸಿತು. ಅಲ್ಲದೆ ಸಂಬಂಧಪಟ್ಟ ಡಿಡಿಪಿಐ ಕಚೇರಿಯ ಗಮನಕ್ಕೂ ವಿಷಯವನ್ನು ವರ್ಗಾಯಿಸಲಾಗಿದೆ ಎಂದು ಆಯಕ್ತರ ಕಚೇರಿ ಮಾಹಿತಿ ನೀಡಿತು.

ವಿಇಎಸ್‌ ಮಾಡೆಲ್ ಕಾನ್ವೆಂಟ್ ಶಾಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿರುವ ನಂಬರ್‌ ಮೂಲಕ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕರೆಗೆ ಲಭ್ಯವಾದರು. ಪ್ರಾಂಶುಪಾಲರಿಗೆ ಕನೆಕ್ಟ್ ಮಾಡುವುದಾಗಿ ತಿಳಿಸಿದರು. ಆದರೆ ಪ್ರಾಂಶುಪಾಲರು ಸಂಪರ್ಕಕ್ಕೆ ಸಿಕ್ಕಿಲ್ಲ. (ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)


ಇದನ್ನೂ ಓದಿರಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಮ್ಮ ಸಂವಿಧಾನವನ್ನು ನಿಷ್ಕ್ರಿಯಗೊಳಿಸಿ, ಅದರ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುವ ಕೆಲಸವನ್ನು ಮನುವಾದಿಗಳು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅಹಿಂದ ವರ್ಗದವರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

  2. ಸಂವಿಧಾನ ವಿರೋಧಿಯಾದ ಆ ಶಾಲೆಯ ಪರವಾನಗಿ ಮತ್ತು ಅಲ್ಲಿಯ ಶಿಕ್ಷಕರು ಬೋಧನೆಗೆ ಅನರ್ಹರೆಂದು ಕರೆದು ಅವರನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ಕಾನೂನು ಮತ್ತು ಹೋರಾಟದ ಮೂಲಕ ತಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.ಜೈ ಭೀಮ್ ಜೈ ಟಿಪ್ಪು.ಜೈ ಕನ್ನಡ

  3. ಈ ಶಾಲೆ ಇದೊಂದೆ ವಿಚಾರ ಅಲ್ಲ….ತುಂಬಾ ವಿಚಾರದಲ್ಲಿಯೂ ಪೋಷಕರಿಗೆ ಬೇಸರ ಮಾಡಿದೆ…careless teachers

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...