Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಆರು ಅಂಶಗಳನ್ನು ಪತ್ರದಲ್ಲಿ ಪ್ರಸ್ತಾಪಿಸಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮ ಆಯೋಜಿಸುವುದಾಗಿಯೂ, ಪ್ರತಿದಿನ ಚಾಚೂತಪ್ಪದೇ ಪ್ರಸ್ತಾವನೆಯನ್ನು ಓದುವುದಾಗಿಯೂ ತಿಳಿಸಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಕೊನೆಗೂ ತಪ್ಪೊಪ್ಪಿಕೊಂಡಿದೆ.

ಈ ಸಂಬಂಧ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿತ್ತು. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿವಾದದ ಕುರಿತು ಶಾಲೆಯ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಶಾಲೆಯ ವತಿಯಿಂದ ಬಂದಿರಲಿಲ್ಲ. ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ರಾಯಚೂರು ಪ್ರಕರಣದ ಜೊತೆಗೆ ವಿಇಎಸ್ ಶಾಲೆಯಲ್ಲಾದ ಸಂವಿಧಾನ ವಿರೋಧಿ ಕೆಲಸವು ಟೀಕೆಗೆ ಒಳಗಾದ ಬೆನ್ನಲ್ಲೇ ಶಾಲೆಯ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ (ಕರ್ನಾಟಕ) ಪ್ರಧಾನ ಸಂಚಾಲಕರಿಗೆ, ರಾಜ್ಯ ಸಂಚಾಲಕರುಗಳಿಗೆ, ಪತ್ರ ಬರೆದಿರುವ ಶಾಲೆಯು ಆರು ಅಂಶಗಳನ್ನು ಪ್ರಸ್ತಾಪಿಸಿದೆ.

“ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ “72 years of Bharathiya Samvidana/Indian Constitution has it reached expiry date” ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ” ಎಂದು ತಿಳಿಸಿದೆ.

“ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ” ಎಂದು ಹೇಳಿದೆ.

“ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ” ಎಂದು ಸ್ಪಷ್ಟನೆ ನೀಡಲಾಗಿದೆ.

“ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ” ಎಂದು ತಿಳಿಸಿದೆ.

“ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ” ಎಂದು ಸ್ಪಷ್ಟಪಡಿಸಲಾಗಿದೆ.

ಕ್ಷಮೆಯಾಚನೆಯ ಬಳಿಕ ಮತ್ತೊಂದು ಹೇಳಿಕೆ: ಕ್ಷಮೆಯಾಚನೆಯ ಹೇಳಿಕೆ ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿಯು ನೀಡಿರುವ ಹೇಳಿಕೆಯು ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ.

“ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ” ಎಂದು ಶಾಲೆ ಆರೋಪಿಸಿದೆ. ಹೀಗಾಗಿ ರಾಮನಗರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಒಂದು ಕಡೆ ಕ್ಷಮೆಯಾಚಿಸಿ, ಮತ್ತೊಂದು ಕಡೆ ಪಿತೂರಿಯ ಆರೋಪ ಹೊರಿಸಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...