“ಭಗತ್‌ಸಿಂಗ್ ಪುಣ್ಯತಿಥಿಯಂದು (ಮಾರ್ಚ್ 23) ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಆರಂಭಿಸಲಾಗುವುದು. ಈ ಸಹಾಯವಾಣಿಯು ನನ್ನ ವೈಯಕ್ತಿಕ ನಂಬರ್ ಕೂಡ ಆಗಿರುತ್ತದೆ. ಯಾರಾದರೂ ಲಂಚ ಕೇಳಿದರೆ, ಆ ಸಂಖ್ಯೆಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ” ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.
ಎಎಪಿ ಪಂಜಾಬ್‌ನಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ್ದು, “ಒಂದು ದಿನವನ್ನೂ ವ್ಯರ್ಥ ಮಾಡುವುದಿಲ್ಲ” ಎಂದು ಭರವಸೆ ನೀಡಿದ್ದಾರೆ. ಇದೇ ಮಾರ್ಚ್ 23 ರಂದು ಭ್ರಷ್ಟಾಚಾರ ವಿರೋಧಿ ಸಹಾಯವಾಣಿಯನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದ್ದಾರೆ.
‘ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಸಂಖ್ಯೆ ನನ್ನ ವ್ಯಕ್ತಿಗತ ನಂಬರ್ ಆಗಿರುತ್ತದೆ. ಯಾರಾದರೂ ಲಂಚ ಕೇಳಿದರೆ ಆ ನಂಬರ್‌ಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
पंजाब में अब भ्रष्टाचार नहीं चलेगा।
— Bhagwant Mann (@BhagwantMann) March 17, 2022
“ನಾನು ಯಾವುದೇ ಸರ್ಕಾರಿ ನೌಕರರಿಗೆ ಬೆದರಿಕೆ ಹಾಕುವುದಿಲ್ಲ. ಏಕೆಂದರೆ ಶೇ. 99ರಷ್ಟು ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. 1 ಪ್ರತಿಶತದಷ್ಟು ನೌಕರರು ಮಾತ್ರ ಭ್ರಷ್ಟರಾಗಿದ್ದಾರೆ. ಅವರಿಂದ ಇಡೀ ವ್ಯವಸ್ಥೆ ಭ್ರಷ್ಟಗೊಂಡಿದೆ. ಎಎಪಿ ಮಾತ್ರ ಈ ಭ್ರಷ್ಟ ವ್ಯವಸ್ಥೆಯನ್ನು ತೊಡೆದು ಹಾಕಲು ಸಾಧ್ಯ” ಎಂದು ಅವರು ತಿಳಿಸಿದ್ದಾರೆ.
ಜನರ ದೈನಂದಿನ ಕೆಲಸಕ್ಕಾಗಿ ಲಂಚವನ್ನು ಕೇಳುವ ಭ್ರಷ್ಟ ಅಧಿಕಾರಿಗಳ ವೀಡಿಯೊಗಳನ್ನು ಅಪ್‌ಲೋಡ್ ಮಾಡಲು ಈ ಸಂಖ್ಯೆಯು ನೆರವಾಗುತ್ತದೆ. ಜೊತೆಗೆ ಅಂತಹ ಭ್ರಷ್ಟ ಅಧಿಕಾರಿಗಳು ಮತ್ತೆಂದೂ ತಪ್ಪು ಮಾಡದಂತೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಪಂಜಾಬ್‌ನಲ್ಲಿನ ಭ್ರಷ್ಟಾಚಾರ ನಿರ್ಮೂಲನೆಯು ಎಎಪಿಯ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಇದು ಮುಖ್ಯಭೂಮಿಕೆಯಾಗಿದೆ ಎಂದು ಮಾನ್ ಸ್ಮರಿಸಿದ್ದಾರೆ.
ಫೆಬ್ರವರಿ 5 ರಂದು ವಿಧಾನಸಭೆ ಚುನಾಚಣೆಯ ಸಭೆ ನಡೆದಿತ್ತು. ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಸರ್ಕಾರ ರಚನೆಯಾದರೆ ಸರ್ಕಾರಿ ಉದ್ಯೋಗಗಳಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿದ್ದರು.
ಮಾನ್ ಮುಖ್ಯಮಂತ್ರಿಯಾದ ಬಳಿಕ ಮೊದಲ ಭಾರಿಗೆ ನಡೆಸಿದ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳ ಸಭೆಯಲ್ಲಿ, ಭ್ರಷ್ಟಾಚಾರ ಮುಕ್ತ ಸರ್ಕಾರದ ಅಗತ್ಯತೆಯ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾರೆ.
ಭ್ರಷ್ಟ ಅಧಿಕಾರಿಗಳಿಗೆ ನನ್ನ ಸರ್ಕಾರದಲ್ಲಿ ಜಾಗವಿಲ್ಲ. ಅಂತಹ ಯಾವುದೇ ದೂರುಗಳು ನನ್ನ ಗಮನಕ್ಕೆ ಬಂದರೆ ಆ ಅಧಿಕಾರಿಗಳಿಗೆ ಯಾವುದೇ ರೀತಿಯ ಕನಿಕರ ತೋರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಾಗರಿಕ ಸೇವೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ‘ಅತ್ಯುತ್ತಮ ಸೇವಾ ಪ್ರಶಸ್ತಿ’ಯನ್ನು ನೀಡುವುದಾಗಿ ಪಂಜಾಬ್ ಸಿಎಂ ಘೋಷಿಸಿದ್ದಾರೆ. ಜನಸಾಮಾನ್ಯರ ಜೀವನದಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಪಂಜಾಬ್: ಟೂರ್ನಿಯ ವೇಳೆ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಹತ್ಯೆ


