Homeಮುಖಪುಟಭ್ರಷ್ಟಾಚಾರ ವಿರೋಧಿ ಸಹಾಯವಾಣಿ ನನ್ನ ವೈಯಕ್ತಿಕ ನಂಬರ್‌ ಆಗಿರಲಿದೆ: ಪಂಜಾಬ್ ಸಿಎಂ

ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ನನ್ನ ವೈಯಕ್ತಿಕ ನಂಬರ್‌ ಆಗಿರಲಿದೆ: ಪಂಜಾಬ್ ಸಿಎಂ

ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಸ್ಮರಿಸಿರುವ ಅವರು, "ಲಂಚ ಕೇಳಿದವರ ಆಡಿಯೊ, ವಿಡಿಯೊ ಕಳುಹಿಸಿ" ಎಂದಿದ್ದಾರೆ.

- Advertisement -
- Advertisement -

“ಭಗತ್‌ಸಿಂಗ್ ಪುಣ್ಯತಿಥಿಯಂದು (ಮಾರ್ಚ್ 23) ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಆರಂಭಿಸಲಾಗುವುದು. ಈ ಸಹಾಯವಾಣಿಯು ನನ್ನ ವೈಯಕ್ತಿಕ ನಂಬರ್‌ ಕೂಡ ಆಗಿರುತ್ತದೆ. ಯಾರಾದರೂ ಲಂಚ ಕೇಳಿದರೆ, ಆ ಸಂಖ್ಯೆಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ” ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.

ಎಎಪಿ ಪಂಜಾಬ್‌ನಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ್ದು, “ಒಂದು ದಿನವನ್ನೂ ವ್ಯರ್ಥ ಮಾಡುವುದಿಲ್ಲ” ಎಂದು ಭರವಸೆ ನೀಡಿದ್ದಾರೆ. ಇದೇ ಮಾರ್ಚ್ 23 ರಂದು ಭ್ರಷ್ಟಾಚಾರ ವಿರೋಧಿ ಸಹಾಯವಾಣಿಯನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದ್ದಾರೆ.

‘ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಸಂಖ್ಯೆ ನನ್ನ ವ್ಯಕ್ತಿಗತ ನಂಬರ್ ಆಗಿರುತ್ತದೆ. ಯಾರಾದರೂ ಲಂಚ ಕೇಳಿದರೆ ಆ ನಂಬರ್‌ಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಯಾವುದೇ ಸರ್ಕಾರಿ ನೌಕರರಿಗೆ ಬೆದರಿಕೆ ಹಾಕುವುದಿಲ್ಲ. ಏಕೆಂದರೆ ಶೇ. 99ರಷ್ಟು ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. 1 ಪ್ರತಿಶತದಷ್ಟು ನೌಕರರು ಮಾತ್ರ ಭ್ರಷ್ಟರಾಗಿದ್ದಾರೆ. ಅವರಿಂದ ಇಡೀ ವ್ಯವಸ್ಥೆ ಭ್ರಷ್ಟಗೊಂಡಿದೆ. ಎಎಪಿ ಮಾತ್ರ ಈ ಭ್ರಷ್ಟ ವ್ಯವಸ್ಥೆಯನ್ನು ತೊಡೆದು ಹಾಕಲು ಸಾಧ್ಯ” ಎಂದು ಅವರು ತಿಳಿಸಿದ್ದಾರೆ.

ಜನರ ದೈನಂದಿನ ಕೆಲಸಕ್ಕಾಗಿ ಲಂಚವನ್ನು ಕೇಳುವ ಭ್ರಷ್ಟ ಅಧಿಕಾರಿಗಳ ವೀಡಿಯೊಗಳನ್ನು ಅಪ್‌ಲೋಡ್ ಮಾಡಲು ಈ ಸಂಖ್ಯೆಯು ನೆರವಾಗುತ್ತದೆ. ಜೊತೆಗೆ ಅಂತಹ ಭ್ರಷ್ಟ ಅಧಿಕಾರಿಗಳು ಮತ್ತೆಂದೂ ತಪ್ಪು ಮಾಡದಂತೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಪಂಜಾಬ್‌ನಲ್ಲಿನ ಭ್ರಷ್ಟಾಚಾರ ನಿರ್ಮೂಲನೆಯು ಎಎಪಿಯ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಇದು ಮುಖ್ಯಭೂಮಿಕೆಯಾಗಿದೆ ಎಂದು ಮಾನ್‌ ಸ್ಮರಿಸಿದ್ದಾರೆ.

ಫೆಬ್ರವರಿ 5 ರಂದು ವಿಧಾನಸಭೆ ಚುನಾಚಣೆಯ ಸಭೆ ನಡೆದಿತ್ತು. ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಸರ್ಕಾರ ರಚನೆಯಾದರೆ ಸರ್ಕಾರಿ ಉದ್ಯೋಗಗಳಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿದ್ದರು.

ಮಾನ್ ಮುಖ್ಯಮಂತ್ರಿಯಾದ ಬಳಿಕ ಮೊದಲ ಭಾರಿಗೆ ನಡೆಸಿದ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳ ಸಭೆಯಲ್ಲಿ, ಭ್ರಷ್ಟಾಚಾರ ಮುಕ್ತ ಸರ್ಕಾರದ ಅಗತ್ಯತೆಯ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾರೆ.

ಭ್ರಷ್ಟ ಅಧಿಕಾರಿಗಳಿಗೆ ನನ್ನ ಸರ್ಕಾರದಲ್ಲಿ ಜಾಗವಿಲ್ಲ. ಅಂತಹ ಯಾವುದೇ ದೂರುಗಳು ನನ್ನ ಗಮನಕ್ಕೆ ಬಂದರೆ ಆ ಅಧಿಕಾರಿಗಳಿಗೆ ಯಾವುದೇ ರೀತಿಯ ಕನಿಕರ ತೋರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾಗರಿಕ ಸೇವೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ‘ಅತ್ಯುತ್ತಮ ಸೇವಾ ಪ್ರಶಸ್ತಿ’ಯನ್ನು ನೀಡುವುದಾಗಿ ಪಂಜಾಬ್ ಸಿಎಂ ಘೋಷಿಸಿದ್ದಾರೆ. ಜನಸಾಮಾನ್ಯರ ಜೀವನದಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಪಂಜಾಬ್‌: ಟೂರ್ನಿಯ ವೇಳೆ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...