Homeಕರ್ನಾಟಕರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ಹುಟ್ಟು ರೈತ ವಿರೋಧಿಯಾಗಿರುವ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು’ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬರ ಪರಿಹಾರ ನೀಡುವಂತೆ ವಿಪಕ್ಷ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತಿದ್ದು, ಈ ಬಗ್ಗೆ ಅವರು ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ‘ಪರಿಹಾರ ಕೊಡಿ ಕುರ್ಚಿ ಬಿಡಿ’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ, ಪರಿಹಾರ ಕೊಡಿ ಎಂದು ಕೇಳಿದಾಗೆಲ್ಲ ನಾವೇನು ನೋಟ್ ಪ್ರಿಂಟಿಂಗ್ ಮೆಷಿನ್ ಇಟ್ಟು ಕೊಂಡಿದ್ದೆವೆಯೇ ಎಂದು ಧಾಷ್ಟ್ಯದಿಂದ ಕೇಳಿದ್ದು ಇದೇ ಬಿಜೆಪಿ ಮುಖ್ಯಮಂತ್ರಿಗಳು. ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು ಎಂದು ಅರ್ಥಮಾಡಿಕೊಳ್ಳದಷ್ಟು ರೈತರು ದಡ್ಡರಲ್ಲ’ ಎಂದಿದ್ದಾರೆ.

‘ಬರಗಾಲದ ಸೂಚನೆ ಸಿಗುತ್ತಿದ್ದಂತೆಯೇ ನಮ್ಮ ಸರ್ಕಾರ ಯುದ್ಧೋಪಾದಿಯಲ್ಲಿ ಸಮೀಕ್ಷೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಸಮೀಕ್ಷೆಯ ನಂತರ ಕಳೆದ ವರ್ಷದ ಸೆಪ್ಟೆಂಬರ್ 13ರಂದು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ನಮ್ಮ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ₹37 ಸಾವಿರ ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇದರಲ್ಲಿ ₹18,177 ಕೋಟಿ ಪರಿಹಾರವನ್ನು ನೀಡುವಂತೆ ಸೆ.23ಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಕ್ಟೋಬರ್‌ನಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಜ್ಞರ ತಂಡ ಆಗಮಿಸಿತ್ತು. ಇಲ್ಲಿಯ ವರಗೆ ಅದು ನೀಡಿರುವ ವರದಿಯ ಗತಿ ಏನಾಗಿದೆಯೋ ಗೊತ್ತಿಲ್ಲ’ ಎಂದು ವಿವರಿಸಿದ್ದಾರೆ.

‘ಕಂದಾಯ ಸಚಿವ ಕೃಷ್ಣ ಬೈರೇಗೌಡರ ಜೊತೆ ನಾನು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಕೃಷಿ ಸಚಿವರು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಲ್ಲಿಯವರೆಗೆ ಬರ ಪರಿಹಾರ ಕೋರಿ 17 ಪತ್ರಗಳನ್ನು ಬರೆದಿದ್ದೇವೆ. ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರು ಯಾವ ಮುಖ ಹೊತ್ತು ಬರಪೀಡಿತ ರೈತರ ಬಳಿ ನಮ್ಮ ವಿರುದ್ಧ ದೂರು ತೆಗೆದುಕೊಂಡು ಹೋಗುತ್ತಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದಿಂದ ಈಗಾಗಲೇ ರಾಜ್ಯದ ರೈತರು ರೊಚ್ಚಿಗೆದ್ದಿದ್ದಾರೆ. ಆದ್ದರಿಂದ ಅವರ ಬಳಿ ಹೋಗುವಾಗ ಜಾಗ್ರತೆಯಿಂದ ಇರಿ ಎಂದಷ್ಟೇ ಹೇಳಬಯಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೇಂದ್ರ ಸರ್ಕಾರ ಪರಿಹಾರ ನೀಡದೆ ಇದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿಲ್ಲ. ಬರಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹870 ಕೋಟಿ. ಬರಪೀಡಿತ 36 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತಿದ್ದೇವೆ. 21 ಜಿಲ್ಲೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಸಲು ಟೆಂಡರ್ ಕರೆದಿದ್ದೇವೆ. 158 ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೋಡಲಾಗಿದೆ. ಖಾಸಗಿ ಜಮೀನು ಇರುವ 3,000 ಕಡೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಲು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಎಲ್ಲಿಯೂ ಕುಡಿಯುವ ನೀರಿನ ಕೊರತೆ ಇಲ್ಲ’ ಎಂದು ವಿವರಿಸಿದ್ದಾರೆ.

‘ಬಿತ್ತನೆ ಬೀಜದ ಆರುವರೆ ಲಕ್ಷ ಕಿಟ್ ಗಳನ್ನು ವಿತರಿಸಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆದಿದ್ದೇವೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಾಚರಣೆ ಪಡೆಯನ್ನು ರಚಿಸಲಾಗಿದೆ. ಈ ಪಡೆಗಳು ಇಲ್ಲಿಯ ವರೆಗೆ 350ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 210 ಸಭೆಗಳನ್ನು ನಡೆಸಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಜನವರಿ 25ರ ವರೆಗೆ ಬರಪೀಡಿತ ಪ್ರದೇಶದ 29 ಲಕ್ಷ ರೈತರಿಗೆ ₹545 ಕೋಟಿ ಪರಿಹಾರ ನೀಡಲಾಗಿದೆ. ರೈತರ ಬೆಳೆಹಾನಿ ಸಮೀಕ್ಷೆಯ ನಂತರ ಇನ್ನೂ 8-9 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಈ ದಾಖಲೀಕರಣದಲ್ಲಿ ಎದುರಾಗಿರುವ ತೊಡಕುಗಳನ್ನು ಸರಿಪಡಿಸಲಾಗಿದೆ. ಬರಪೀಡಿತ ಪ್ರದೇಶದಲ್ಲಿ ನಮ್ಮ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಜಿದ್ದಿಗೆ ಬಿದ್ದವರಂತೆ ಪೈಸೆ ಪರಿಹಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಈ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೋರಾಟದ ನಾಟಕ ಮಾಡುತ್ತಿದ್ದಾರೆ’ ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಮುಂದೆ ಧರಣಿ ಕೂರಬೇಕು. ಇವರ ಆಟಾಟೋಪಗಳೇನಿದ್ದರೂ ರಾಜ್ಯದಲ್ಲಿ ಮಾತ್ರ, ಇಲ್ಲಿ ಎಲ್ಲರು ಹುಲಿ-ಸಿಂಹಗಳೇ, ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ’ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.

‘ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...