Homeಮುಖಪುಟರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ...

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2021ರಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಭಾಗವಹಿಸಿದ್ದರ ಬಗ್ಗೆ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

“ನಿಮ್ಮ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವು ಮಸಾಲೆ ಸೇರಿಸಿದ್ದೀರಿ, ಇದು ಸರಳವಾದ ಮರುಟ್ವೀಟ್ ಆಗಿರಲಿಲ್ಲ” ಎಂದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಇಂತಹ ವಿಚಾರಗಳ ಕುರಿತು ವಿಚಾರಣಾ ನ್ಯಾಯಾಲಯವೇ ತೀರ್ಮಾನ ತೆಗೆದುಕೊಳ್ಳಬೇಕು ತಾನಲ್ಲ‌” ಎಂದಿದೆ.

ಪಂಜಾಬ್‌ನ ಭಟಿಂಡಾ ಜಿಲ್ಲೆಯ 73 ವರ್ಷದ ಮಹಿಂದರ್ ಕೌರ್ ಅವರು ಕಂಗನಾ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಂಗನಾ ಅವರು, 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ “ಶಾಹೀನ್ ಬಾಗ್ ದಾದಿ ಬಿಲ್ಕಿಸ್” ಎಂದು ತಪ್ಪಾಗಿ ಗುರುತಿಸುವ ಮೂಲಕ ಟ್ವೀಟ್‌ನಲ್ಲಿ ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರಭಾವಿ ಅಜ್ಜಿ ಎಂದು ಟೈಮ್‌ ಮ್ಯಾಗಝಿನ್‌ನಲ್ಲಿ ಪ್ರಸಿದ್ಧರಾಗಿದ್ದವರು ಈಗ 100 ರೂಪಾಯಿಗೆ ಸಿಗುತ್ತಿದ್ದಾರೆ. ಭಾರತದ ಅಂತಾರಾಷ್ಟ್ರೀಯ ಸಾರ್ವಜನಿಕ ರಾಯಭಾರಿಯನ್ನು (ಅಜ್ಜಿ) ಪಾಕಿಸ್ತಾನದ ಪತ್ರಕರ್ತರು ಮುಜುಗರ ಉಂಟುಮಾಡುವ ರೀತಿಯಲ್ಲಿ ಅಪಹರಿಸಿದ್ದಾರೆ. ಅಂತಾರಾಷ್ಟ್ರೀಯವಾಗಿ ನಮ್ಮ ಪರ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಅವರು ಕಂಗನಾ ಟ್ವೀಟ್‌ ಮಾಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ಪರ ವಕೀಲ, “ಅವರು (ಕಂಗನಾ) ಇನ್ನೊಬ್ಬರು ವ್ಯಕ್ತಿಯ ಪೋಸ್ಟ್ ಅನ್ನು ಮರುಟ್ವೀಟ್ ಮಾತ್ರ ಮಾಡಿದ್ದಾರೆ. ಮೂಲ ಟ್ವೀಟ್ ಮಾಡಿದ ವ್ಯಕ್ತಿಗೆ ಸಮನ್ಸ್ ನೀಡಲಾಗಿಲ್ಲ” ಎಂದು ವಾದಿಸಿದ್ದಾರೆ.

ಅಲ್ಲದೆ, ಕಂಗನಾ ಮಾತನಾಡಿದ್ದು ಮಹಿಂದರ್ ಕೌರ್‌ ಅವರ ಬಗ್ಗೆ ಅಲ್ಲ, ಬದಲಿಗೆ ಶಾಹೀನ್‌ ಬಾಗ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್‌ ಬಾನು ಎಂಬವರ ಬಗ್ಗೆ. ಈ ಕುರಿತು ಕಂಗನಾ ಸ್ಪಷ್ಟೀಕರಣ ನೀಡಿದ್ದು ಅದನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದರಿಂದ ತೃಪ್ತವಾಗದ ನ್ಯಾಯಾಲಯ ರಣಾವತ್ ಅವರ ಟ್ವೀಟ್‌ಗಳ ಬಗ್ಗೆ ಪ್ರತಿಕ್ರಿಯಿಸಲು ಇಚ್ಛಿಸಲಿಲ್ಲ.

“ಸಾಕ್ಷ್ಯ ಸ್ವೀಕಾರಾರ್ಹವಲ್ಲದ ಕಾರಣ ದೂರನ್ನು (ವಿಚಾರಣಾ ನ್ಯಾಯಾಲಯ) ವಜಾಗೊಳಿಸಬಹುದು. ನಿಮ್ಮ ಟ್ವೀಟ್ ಬಗ್ಗೆ ಹೇಳಿಕೆ ನೀಡುವಂತೆ ನಮ್ಮನ್ನು ಕೇಳಬೇಡಿ. ಇದು ನಿಮ್ಮ ವಿಚಾರಣೆಗೆ ಅಡ್ಡಿಪಡಿಸಬಹುದು. ನೀವು ಅರ್ಜಿ ಹಿಂತೆಗೆದುಕೊಳ್ಳಿ. ಹಿಂತೆಗೆದುಕೊಳ್ಳಲು ಬಯಸುತ್ತೀರಾ? ” ಎಂದು ನ್ಯಾಯಾಲಯ ಕೇಳಿದೆ. ಆ ನಂತರ ಕಂಗನಾ ಪರ ವಕೀಲರು ಅರ್ಜಿ ಹಿಂಪಡೆಯಲು ನಿರ್ಧರಿಸಿದರು. ಹಾಗಾಗಿ, ನ್ಯಾಯಾಲಯ ಕೂಡ ಅರ್ಜಿಯನ್ನು ವಜಾಗೊಳಿಸಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಕರಣ ಸಂಬಂಧ ಫೆಬ್ರವರಿ 2022ರಲ್ಲಿ ಭಟಿಂಡಾ ಮ್ಯಾಜಿಸ್ಟ್ರೇಟ್ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಜಾಗೊಳಿಸಿತ್ತು.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...