Homeಮುಖಪುಟಜಿನೀವಾದಲ್ಲಿ 'ಭಾರತ ವಿರೋಧಿ' ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

ಜಿನೀವಾದಲ್ಲಿ ‘ಭಾರತ ವಿರೋಧಿ’ ಪೋಸ್ಟರ್‌: ಸ್ವಿಸ್ ರಾಯಭಾರಿಗೆ ಸಮನ್ಸ್

- Advertisement -
- Advertisement -

ಜಿನೀವಾದಲ್ಲಿ ”ಭಾರತ ವಿರೋಧಿ ಪೋಸ್ಟರ್‌ಗಳನ್ನು” ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ದಿನದ ನಂತರ, ಮಾರ್ಚ್ 5ರ ಭಾನುವಾರದಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸ್ವಿಸ್ ರಾಯಭಾರಿಯನ್ನು ಕರೆಸಿ ಭಾರತ ಪ್ರತಿಭಟಿಸಿದೆ.

ಭಾನುವಾರ, MEA ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ಅವರು, ಸ್ವಿಸ್ ರಾಯಭಾರಿಯನ್ನು ಕರೆದು, ಜಿನೀವಾದಲ್ಲಿನ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಮುಂದೆ ಆಧಾರರಹಿತ ಮತ್ತು ದುರುದ್ದೇಶಪೂರಿತ ಭಾರತ ವಿರೋಧಿ ಪೋಸ್ಟರ್‌ಗಳನ್ನು ಹಾಕಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತೀಯ ವಿದ್ಯಾರ್ಥಿಯೊಬ್ಬರು ಜಿನೀವಾದಲ್ಲಿ ತೆಗೆದ ವೀಡಿಯೊವನ್ನು ಅನಾಮಧೇಯ ಟ್ವಿಟ್ಟರ್ ಬಳಕೆದಾರರು (ಟ್ವಿಟರ್ ಬ್ಲೂ ಟಿಕ್ನೊಂದಿಗೆ)  ಹಂಚಿಕೊಂಡ ನಂತರ ಸ್ವಿಸ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.

”ಜಿನೀವಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಚಿತ್ರೀಕರಿಸಿದ ವೀಡಿಯೊ ವೈರಲ್ ಆಗಿದ್ದು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಕಟ್ಟಡದ ಬಳಿ ಭಾರತದ ವಿರುದ್ಧ ಉನ್ನತ ಮಟ್ಟದ ಪ್ರಚಾರವನ್ನು ಬಿಚ್ಚಿಟ್ಟಿರುವುದನ್ನು ಕಾಣಬಹುದು. ಇದು ಹೊಸ ಟೂಲ್‌ಕಿಟ್ ಅಥವಾ 2024 ರ ಯೋಜಿತ ಸಿದ್ಧತೆಯೇ??” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಈ ವಿಡಿಯೋ ಬಗ್ಗೆ ಭಾರತೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ಅವರು ಇನ್ನು ಮುಂದೆ ಭಾರತವನ್ನು ತಡೆಯಲು ಸಾಧ್ಯವಿಲ್ಲ, ಭಾರತವು ಬೆಳೆಯುತ್ತಿದೆ, ಭಾರತವು ಬೆಳೆಯುತ್ತಿದೆ, ಭಾರತವು ಅಭಿವೃದ್ಧಿ ಹೊಂದುತ್ತಿದೆ” ಎಂದು ಒಬ್ಬರು ರೀಟ್ವೀಟ್ ಮಾಡಿದ್ದಾರೆ.

”ಭಾರತದ ಬಲವಾದ ವಿದೇಶಾಂಗ ನೀತಿ ಮತ್ತು ಪ್ರಸ್ತುತ ಸಮಯದ ಅನೇಕ ವಿಷಯಗಳಲ್ಲಿ ತಟಸ್ಥ ನಿಲುವುಗಳನ್ನು ತಾಳುತ್ತಿದೆ. ಉದಾಹರಣೆಗೆ ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ಕ್ರಮ, ಇರಾನ್ ವಿಷಯ ಮತ್ತು ಇನ್ನೂ ಹೆಚ್ಚಿನವು” ಎಂದು ಮತ್ತೊಬ್ಬರು ಹೇಳಿದ್ದಾರೆ.

ಭಾರತದಲ್ಲಿನ ಸ್ವಿಸ್ ರಾಯಭಾರಿ ರಾಲ್ಫ್ ಹೆಕ್ನರ್ ಅವರ ಪರವಾಗಿ ನೀಡಿದ ಹೇಳಿಕೆಯಲ್ಲಿ, ”ರಾಯಭಾರ ಕಚೇರಿಯು, ಭಾರತದ ಕಳವಳವನ್ನು ಗಂಭೀರತೆಯೊಂದಿಗೆ ಬರ್ನ್‌ಗೆ ತಿಳಿಸುತ್ತದೆ” ಎಂದು ಹೇಳಿದರು.

ಭಾರತವು ಜಾಗತಿಕ ಸಂಸ್ಥೆ ಜಿ20 ಅಧ್ಯಕ್ಷ ಸ್ಥಾನ ವಹಿಸಿರುವ ಈ ಸಮಯದಲ್ಲಿ, ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ.

ಭಾರತವು ಅನೇಕ ದೇಶಗಳಲ್ಲಿ ಈ ರೀತಿಯ ಘಟನೆಗಳನ್ನು ಎದುರಿಸಿದೆ. ಇತ್ತೀಚಿನ ವರದಿಗಳ ಪ್ರಕಾರ ಖಲಿಸ್ತಾನಿ ಬೆಂಬಲಿಗರು ಆಸ್ಟ್ರೇಲಿಯಾದಲ್ಲಿ ಭಾರತೀಯರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ. ಮಾಲ್ಡೀವ್ಸ್‌ನಲ್ಲಿನ ‘ಇಂಡಿಯಾ ಔಟ್ ಅಭಿಯಾನ’ ಇಂತಹ ಭಾರತ ವಿರೋಧಿ ಅಭಿಯಾನಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...