Homeರಾಷ್ಟ್ರೀಯಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

ಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ವಿರುದ್ಧ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕಾಗಿ ಹರಿಯಾಣ ಬಿಜೆಪಿ ಐಟಿ ಸೆಲ್‌‌ ವಿಭಾಗದ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ಪಕ್ಷವು ಗುರುವಾರ ಕೈಬಿಟ್ಟಿದೆ. ಅವರನ್ನು ಬಂಧಿಸುವಂತೆ ಒತ್ತಡಗಳು ಹೆಚ್ಚುತ್ತಿವೆ. 2018 ರ ಟ್ವೀಟ್‌ಗಾಗಿ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಅರುಣ್ ಯಾದವ್ ಅವರನ್ನು ಕೂಡಾ ಟ್ವೀಟ್‌ ಆಧಾರದಲ್ಲಿ ಬಂಧಿಸಬೇಕು ಎಂದು ಅವರ ವಿರೋಧಿಗಳು ಅವರ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ.

#ArrestArunYadav ಎಂಬ ಹ್ಯಾಶ್‌ ಟ್ಯಾಗ್ ಗುರುವಾರ ಟ್ವಿಟರ್‌ನಲ್ಲಿ ಟಾಪ್ ಟ್ರೆಂಡ್‌ಗಳಲ್ಲಿ ಒಂದಾಗಿತ್ತು. 2017 ಮತ್ತು ಈ ವರ್ಷದ ಮೇ ತಿಂಗಳ ನಡುವೆ ಪೋಸ್ಟ್ ಮಾಡಲಾಗಿರುವ ಅವರ ಟ್ವೀಟ್‌ಗಳನ್ನು ಸಾವಿರಾರು ಬಾರಿ ಜನರು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರುಣ್‌ ಯಾದವ್ ವಿರುದ್ಧ ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಹರಿಯಾಣ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಬಿಜೆಪಿ ಅವರನ್ನು ಇನ್ನೂ ಪಕ್ಷದಿಂದ ತೆಗೆದುಹಾಕಿಲ್ಲ.

“ಬಿಜೆಪಿಯು ಮತ್ತೊಂದು ‘ಫ್ರಿಂಜ್ ಎಲಿಮೆಂಟ್’ ಅನ್ನು ವಜಾಗೊಳಿಸಿದೆ. ಆದರೆ ಈ ಕಣ್ಣಿಗೆ ಮಣ್ಣೆರೆಚುವ ಬದಲು, ಈ ‘ದ್ವೇಷದ ಗುಲಾಮರನ್ನು’ ಬಂಧನಕ್ಕೆ ಒಳಗಾಗುತ್ತಾರೆಯೆ?” ಎಂದು ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

“ಹಲೋ ಹರಿಯಾಣ DGP, ದೆಹಲಿ ಪೊಲೀಸ್‌. 2018 ರ ಟ್ವೀಟ್‌ಗಾಗಿ ಜುಬೈರ್ ಅವರನ್ನು ಬಂಧಿಸಬಹುದಾದರೆ, ಅರುಣ್ ಯಾದವ್ ಯಾಕೆ ಬಂಧಿಸಬಾರದು” ಎಂದು ಟಿಪ್ಪು ಸುಲ್ತಾನ್ ಪಕ್ಷದ ಅಧ್ಯಕ್ಷ ಶೇಖ್ ಸಾದಿಕ್ ಟ್ವೀಟ್ ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಲಾಗಿದ್ದ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯನ್ನು ಎತ್ತಿ ತೋರಿಸಿದ ನಂತರ ಜೂನ್ 27 ರಂದು ಜುಬೈರ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಯಿತು.

ಜುಲೈ 2 ರಂದು, ಪೋಲೀಸರು ಜುಬೇರ್ ವಿರುದ್ಧ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿಯಲ್ಲಿ ಹೆಚ್ಚುವರಿ ಆರೋಪವನ್ನು ಸೇರಿಸಿದ್ದು, 14 ದಿನಗಳವರೆಗೆ ಕಸ್ಟಡಿಯಲ್ಲಿ ಇರಿಸಲಾಗಿದೆ. ಜುಲೈ 4 ರಂದು, ದ್ವೇಷದ ಆರೋಪ ಹೊತ್ತಿರುವ ಮೂವರು ಹಿಂದೂ ಕಟ್ಟರ್‌ವಾದಿಗಳನ್ನು “ಹೇಟ್‌ ಮೋಂಗರ್‌ಗಳು” ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಉತ್ತರ ಪ್ರದೇಶದಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ಜುಬೇರ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಳೆದ ವಾರ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಆಕೆಯನ್ನು ಏಕೆ ಬಂಧಿಸಿಲ್ಲ ಮತ್ತು ‘ದೇಶದಾದ್ಯಂತ ಗಲಭೆ ಹೊತ್ತಿ ಉರಿಯಲು’ ಆಕೆಯೆ ಹೊಣೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...