Homeಅಂತರಾಷ್ಟ್ರೀಯಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

- Advertisement -
- Advertisement -

ಲಂಡನಿನ ವೆಸ್ಟ್‌‌ಮಿನಿಸ್ಟರ್ ಹೊರಗಿನ ಲಾಕ್ಡೌನ್ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು ಬಿಬಿಸಿ ಪತ್ರಕರ್ತನನ್ನು ಬೆನ್ನಟ್ಟಿರುವ ಘಟನೆ ಕಳೆದ ಭಾನುವಾರ ನಡೆದಿದೆ. ಘಟನೆಯ ಬಗ್ಗೆ ಇಂಗ್ಲೇಂಡ್ ಪ್ರಧಾನಿ ಬೋರಿಸ್‌ ಜೋನ್ಸನ್‌‌ ಅಘಾತ ವ್ಯಕ್ತಪಡಿಸಿದ್ದಾರೆ.

ಘಟನೆಯ ವಿಡಿಯೊವನ್ನು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಬಿಬಿಸಿ ನ್ಯೂಸ್‌‌ನ ಪೊಲಿಟಿಕಲ್‌ ಎಡಿಟರ್‌ ಆಗಿರುವ ನಿಕೋಲಸ್ ವ್ಯಾಟ್ ಅವರನ್ನು ಬೆನ್ನಟ್ಟಿರುವ ಗುಂಪೊಂದು, ಅವರನ್ನು ‘ದೇಶದ್ರೋಹಿ’ ಮತ್ತು ‘ಕಲ್ಮಷ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಇಂಗ್ಲೆಂಡ್‌ ಸರ್ಕಾರವು ಕೊರೊನಾ ನಿರ್ಬಂಧವನ್ನು ನಾಲ್ಕು ವಾರಗಳವರೆಗೆ ವಿಸ್ತರಿಸುವುದನ್ನು ವಿರೋಧಿಸಿ ಈ ಜನಸಮೂಹವು ವೆಸ್ಟ್‌‌ಮಿನಿಷ್ಟರ್‌‌ನಲ್ಲಿ ಜಮಾಯಿಸಿತ್ತು.

ಪತ್ರಕರ್ತನನ್ನು ಬೆನ್ನಟ್ಟಿದ ಪ್ರತಿಭಟನಾಕರನೊಬ್ಬ, “ಲಾಕ್‌ಡೌನ್‌ಗಳು ಕಾನೂನು ಬದ್ಧವೆಂದು ನೀವು ಯಾಕೆ ವರದಿ ಮಾಡಿದ್ದೀರಿ? ಜನರನ್ನು ಅವರ ಮನೆಯಲ್ಲಿ ಲಾಕ್‌ ಮಾಡುವುದನ್ನು ಹೇಗೆ ಕಾನೂನು ಬದ್ಧವಾವಾಗುತ್ತದೆ?” ಎಂದು ಕೇಳಿದ್ದಾರೆ.

ಆಕ್ರಮಣಕಾರಿ ಗುಂಪು ನಿಕೋಲಸ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದನ್ನು ಪೊಲೀಸರು ನೋಡುತ್ತಿದ್ದರೂ ಅವರ ರಕ್ಷಣೆಗೆ ಮುಂದಾಗಿಲ್ಲ.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

“ತಮ್ಮ ಕೆಲಸ ಮಾಡುತ್ತಿರುವ ನಿಕ್‌ ವ್ಯಾಟ್ ಅವರನ್ನು ಬೆನ್ನಟ್ಟುತ್ತಿರುವುದು ನಾಚಿಕೆಗೇಡಾಗಿದೆ. ಮಾಧ್ಯಮಗಳು ಭಯವಿಲ್ಲದೆ ವರದಿ ಮಾಡಬೇಕು. ಅವು ನಮ್ಮ ಪ್ರಜಾಪ್ರಭುತ್ವದ ಜೀವನಾಡಿ” ಎಂದು ಪ್ರಧಾನಿ ಬೋರಿಸ್ ಜಾನ್ಸನ್‌ ಟ್ವೀಟ್ ಮಾಡಿದ್ದಾರೆ.

ಅವರ ಅಧಿಕೃತ ವಕ್ತಾರರು, “ಈ ವಿಡಿಯೊ ತುಣುಕು ತೀವ್ರವಾಗಿ ಗೊಂದಲಕ್ಕೀಡುಮಾಡಿದೆ. ಪತ್ರಕರ್ತರ ಮೇಲೆ ಎಂದಿಗೂ ಇಂತಹದ್ದು ನಡೆಯಬಾರದು. ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದರೂ, ಹಿಂಸೆ ಮತ್ತು ಈ ರೀತಿಯ ಬೆದರಿಕೆ ಎಂದಿಗೂ ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಈ ಘಟನೆಯನ್ನು ದೇಶದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಮತ್ತು ಬಿಬಿಸಿ ಕೂಡ ಖಂಡಿಸಿದೆ.

“ಈ ನಡವಳಿಕೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಎಲ್ಲಾ ಪತ್ರಕರ್ತರು ಬೆದರಿಕೆ ಅಥವಾ ಅಡೆತಡೆಗಳಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗಬೇಕು” ಎಂದು ಬಿಬಿಸಿ ನ್ಯೂಸ್‌ನ ವಕ್ತಾರರು ಹೇಳಿದ್ದಾರೆ.

ಪ್ರೀತಿ ಪಟೇಲ್ ಅವರು, “ಈ ನಡವಳಿಕೆ ಎಂದಿಗೂ ಸ್ವೀಕಾರಾರ್ಹವಲ್ಲ. ಪತ್ರಕರ್ತರ ಸುರಕ್ಷತೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ತತ್ವದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...