Homeಮುಖಪುಟಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

- Advertisement -
- Advertisement -

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಇಬ್ಬರು ಹಾಲಿ ಶಾಸಕರು, ಹಲವು ಮಾಜಿ ಶಾಸಕರು ಮತ್ತು ರಾಜ್ಯ ಮಹಿಳಾ ಘಟಕದ ಮುಖ್ಯಸ್ಥೆ ರಿತು ಜೈಸ್ವಾಲ್ ಸೇರಿದಂತೆ 27 ಮಂದಿಯನ್ನು ಆರ್‌ಜೆಡಿ ಸೋಮವಾರ ಪಕ್ಷದಿಂದ ಉಚ್ಚಾಟಿಸಿದೆ.

“ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಧಿಕೃತ ಮಾಹಿತಿಯ ಆಧಾರದ ಮೇಲೆ 27 ಮಂದಿಯನ್ನು ಆರು ವರ್ಷಗಳ ಕಾಲ ಆರ್‌ಜೆಡಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ” ಎಂದು ಆರ್‌ಜೆಡಿಯ ರಾಜ್ಯಾಧ್ಯಕ್ಷ ಮಂಗನಿ ಲಾಲ್ ಮಂಡಲ್ ಸೋಮವಾರ ಸಂಜೆ ಬಿಡುಗಡೆ ಮಾಡಿದ ಅಧಿಕೃತ ಪತ್ರದಲ್ಲಿ ತಿಳಿಸಿದ್ದಾರೆ.

ಉಚ್ಚಾಟಿತರಲ್ಲಿ ಹಾಲಿ ಶಾಸಕರಾದ ಛೋಟೆ ಲಾಲ್ ರೈ, ಮೊಹಮ್ಮದ್ ಕಮ್ರಾನ್ ಒಳಗೊಂಡಿದ್ದಾರೆ. ರೈ ಪ್ರಸ್ತುತ ಪಾರ್ಸಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಗೋವಿಂದಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಮ್ರಾನ್ ಅವರನ್ನು ಈ ಬಾರಿ ಕೈಬಿಡಲಾಗಿದೆ.

ಮಾಜಿ ಶಾಸಕರಾದ ರಾಮ್ ಪ್ರಕಾಶ್ ಮಹ್ತೋ, ಅನಿಲ್ ಸಹಾನಿ, ಸರೋಜ್ ಯಾದವ್, ಗಣೇಶ್ ಭಾರ್ತಿ ಮತ್ತು ಅನಿಲ್ ಯಾದವ್ ಉಚ್ಚಾಟಿತರಲ್ಲಿ ಸೇರಿದ್ದಾರೆ. ಗಮನಾರ್ಹವಾಗಿ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ರಿತು ಜೈಸ್ವಾಲ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ರಿತು ಅವರು ಪರಿಹಾರ್ ಕ್ಷೇತ್ರದಿಂದ ಆರ್‌ಜೆಡಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಾರೆ.

ವಿರೋಧ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆರ್‌ಜೆಡಿಯ ತೇಜಸ್ವಿ ಯಾದವ್ ಸೋಮವಾರ ಸಂಜೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿ, ಛತ್ ಪೂಜೆಗಾಗಿ ಮನೆಗೆ ಬಂದಿರುವ ವಲಸಿಗರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ನಂತರವೇ ರಾಜ್ಯದಿಂದ ಹಿಂತಿರುಗಬೇಕೆಂದು ಮನವಿ ಮಾಡಿದ್ದಾರೆ. “ಮುಂದಿನ ಛತ್ ವೇಳೆಗೆ ಯಾರೂ ಉದ್ಯೋಗ, ಶಿಕ್ಷಣ ಅಥವಾ ಚಿಕಿತ್ಸೆಗಾಗಿ ಬಿಹಾರದಿಂದ ಹೊರಗೆ ಹೋಗಬೇಕಾಗಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

ಹಬ್ಬಕ್ಕಾಗಿ ಊರಿಗೆ ಮರಳುತ್ತಿರುವ ವಲಸಿಗರು ರೈಲುಗಳನ್ನು ಹತ್ತುವಾಗ ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ತೇಜಸ್ವಿ ಯಾದವ್, ಕೇಂದ್ರ ರೈಲ್ವೆ ಸಚಿವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 12,000 ವಿಶೇಷ ರೈಲುಗಳ ವ್ಯವಸ್ಥೆ ಮಾಡುವ ಸಚಿವರ ಹಿಂದಿನ ಹೇಳಿಕೆಯನ್ನು ಅಣಕಿಸಿದ್ದಾರೆ.

“ಎಲ್ಲಿ ಸಚಿವ ರೈಲುಗಳು? ಬಿಹಾರದ ಜನತೆ ತುಂಬಿ ತುಳುಕುತ್ತಿರುವ ರೈಲುಗಳಲ್ಲಿ, ಶೌಚಾಲಯಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದಾರೆ. ಬಿಹಾರದ ಜನತೆಗೆ ಅವಮಾನ ಮಾಡಿದ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರ ಕ್ಷಮೆ ಯಾಚಿಸಬೇಕು” ಎಂದು ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ.

“ಮಹಾಘಟಬಂಧನದ ಜಂಟಿ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆ ಮಾಡುತ್ತೇವೆ. ರಾಹುಲ್ ಗಾಂಧಿ ಜೊತೆ ಜಂಟಿ ಚುನಾವಣಾ ಪ್ರಚಾರ ಮಾಡುತ್ತೇವೆ” ಎಂದು ತೇಜಸ್ವಿ ಯಾದವ್ ಘೋಷಿಸಿದ್ದಾರೆ.

‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...