Homeಕರ್ನಾಟಕಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

- Advertisement -
- Advertisement -

ಪಕ್ಷ ಮತ್ತು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಜಾಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಇಂದು (ಮಾರ್ಚ್ 26, 2025) ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿ ಪತ್ರ ಬರೆದಿದೆ. ಪತ್ರದ ಪ್ರಕಾರ, ಫೆಬ್ರವರಿ 10 ರಂದು ಯತ್ನಾಳ್ ಅವರಿಗೆ ಕಳುಹಿಸಲಾದ ‘ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ’ಯನ್ನು ಸಮಿತಿ ಪರಿಶೀಲಿಸಿದೆ. ಅವರ ಪಕ್ಷದ ಶಿಸ್ತಿನ ಪುನರಾವರ್ತಿತ ಉಲ್ಲಂಘನೆಗಳನ್ನು ಗಂಭೀರವಾಗಿ ಗಮನಿಸಿದೆ. ಉತ್ತಮ ನಡವಳಿಕೆಯ ಹಿಂದಿನ ಭರವಸೆಗಳ ಹೊರತಾಗಿಯೂ ಅವರು ಪದೇ ಪದೇ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಸಮಿತಿ ಕಂಡುಕೊಂಡಿದೆ ಎಂದು ಹೇಳಿದೆ.

ಪರಿಣಾಮವಾಗಿ, ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲು ನಿರ್ಧರಿಸಿದೆ.

ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಸಹಿ ಮಾಡಿದ ಆದೇಶದಲ್ಲಿ, ಯತ್ನಾಳ್ ಅವರು ಈ ಹಿಂದೆ ಹೊಂದಿದ್ದ ಪಕ್ಷದ ಎಲ್ಲ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ.

ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮ: ವಿಜಯೇಂದ್ರ

‘ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ” ಎಂದು ಹೇಳಿದ್ದಾರೆ.

“ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ” ಎಂದಿದ್ದಾರೆ.

“ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ. ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ” ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ದರಗಳು 3-5% ಏರಿಕೆ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...