Homeಮುಖಪುಟಸಿಖ್ ವಿರೋಧಿ ದಂಗೆ | ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ...

ಸಿಖ್ ವಿರೋಧಿ ದಂಗೆ | ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

- Advertisement -
- Advertisement -

ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮಂಗಳವಾರ (ಫೆ.25) ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ.

ಸಿಖ್ ವಿರೋಧಿ ದಂಗೆಯ ವೇಳೆ, 1984ರ ನವೆಂಬರ್‌ 1ರಂದು ದೆಹಲಿಯ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್ ಹಾಗೂ ಅವರ ಪುತ್ರ ತರುಣ್‌ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್ ಅವರಿಗೆ ಮರಣದಂಡನೆ ವಿಧಿಸುವಂತೆ ಜಸ್ವಂತ್ ಅವರ ಪತ್ನಿ ಕೋರಿದ್ದರು.

ಪ್ರಸ್ತುತ ಸಜ್ಜನ್ ಕುಮಾರ್‌ ತಿಹಾರ್‌ ಜೈಲಿನಲ್ಲಿದ್ದಾರೆ. ಫೆ.12ರಂದು ನ್ಯಾಯಾಲಯವು ಪ್ರಕರಣದಲ್ಲಿ ಸಜ್ಜನ್‌ ಕುಮಾರ್ ದೋಷಿ ಎಂದು ಘೋಷಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಮಾರಕ ಆಯುಧಗಳನ್ನು ಹಿಡಿದ ಬೃಹತ್ ಗುಂಪೊಂದು ದೊಡ್ಡ ಪ್ರಮಾಣದಲ್ಲಿ ಸಿಖ್ಖರನ್ನು ಲೂಟಿ ಮಾಡಿತ್ತು. ಬೆಂಕಿ ಹಚ್ಚು ಅವರ ಆಸ್ತಿಪಾಸ್ತಿಗಳ ನಾಶ ಮಾಡಿತ್ತು.

ಈ ಪ್ರಕರಣದಲ್ಲಿ ಸಂತ್ರಸ್ತ ಜಸ್ವಂತ್ ಸಿಂಗ್ ಅವರ ಪತ್ನಿಯ ಮನೆ ಮೇಲೆ ದಾಳಿ ಮಾಡಿದ್ದ ಗುಂಪೊಂದು, ಜಸ್ವಂತ್ ಸಿಂಗ್ ಮತ್ತು ಅವರ ಮಗನನ್ನು ಹತ್ಯೆ ಮಾಡಿತ್ತು. ಮನೆಯನ್ನು ಲೂಟಿಗೈದು ಬೆಂಕಿ ಹಚ್ಚಿತ್ತು.

ಸಜ್ಜನ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಲಯ, ಸಜ್ಜನ್ ಕುಮಾರ್ ಗಲಭೆಯಲ್ಲಿ ಸ್ವತಃ ಭಾಗವಹಿಸಿದ್ದು ಮಾತ್ರವಲ್ಲದೆ, ಜನ ಸಮೂಹವನ್ನು ಮುನ್ನಡೆಸಿದ್ದಾರೆ ಎಂಬ ಪ್ರಾಥಮಿಕ ಅಭಿಪ್ರಾಯ ರೂಪಿಸಲು ಹಲವು ಸಾಕ್ಷ್ಯಗಳನ್ನು ಕಂಡುಕೊಂಡಿದೆ ಎಂದು ವರದಿಗಳು ಹೇಳಿತ್ತು.

ತಮಿಳುನಾಡು| ಪ್ರಬಲಜಾತಿ ಯುವತಿಯೊಂದಿಗೆ ಸಂಬಂಧ ಹೊಂದಿದ್ದ ದಲಿತನ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Actually there is no proof of Sajjan Kumar’s involvement. Because he is a Congress leader and now ofcourse they’re out of power he has been fixed and punished.

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...