HomeಅಂಕಣಗಳುKarnataka SIRಗ್ಯಾನೇಶ್‌ ಕುಮಾರ್ ವಜಾ - ಎಸ್‌ಐಆರ್ ಸಂಪೂರ್ಣ ರದ್ದತಿಗೆ ಆಗ್ರಹ; ಅ.10ರ ದೆಹಲಿ ಹೋರಾಟಕ್ಕೆ ಎಸ್‌ಐಆರ್...

ಗ್ಯಾನೇಶ್‌ ಕುಮಾರ್ ವಜಾ – ಎಸ್‌ಐಆರ್ ಸಂಪೂರ್ಣ ರದ್ದತಿಗೆ ಆಗ್ರಹ; ಅ.10ರ ದೆಹಲಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ವಜಾಗೊಳಿಸಿ, ಎಸ್‌ಐಆರ್ ಸಂಪೂರ್ಣ ರದ್ದು ಮಾಡುವಂತೆ ಅ.10 ರಂದು ಸಿಜೆಪಿ ಕರೆ ನೀಡಿರುವ ದೆಹಲಿ ಹೋರಾಟಕ್ಕೆ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಕರ್ನಾಟಕದ ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಅಂದು 5 ಗಂಟೆಗೆ ಪಂಜಿನೊಂದಿಗೆ ಪ್ರತಿಭಟನಾ ಸಭೆ ನಡೆಸಲು ಕರೆ ನೀಡಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ‘ಎಸ್‌ಐಆರ್ ವಿರೋಧಿ ಒಕ್ಕೂಟ’, “ಕಾಕ್ರೋಚ್ ಜನತಾ ಪಾರ್ಟಿ ಸೇರಿದಂತೆ ಇತರೇ ಎಲ್ಲ ಜನಪರ ಸಂಘಟನೆಗಳ ವತಿಯಿಂದ ಅಕ್ಟೋಬರ್ 10 ರಂದು ದೆಹಲಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಆದರೆ, ದೆಹಲಿಯ ಪೊಲೀಸರು ಹಾಗೂ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಆಶಯಗಳಲ್ಲಿ ಒಂದಾಗಿರುವ ಹೋರಾಟ ನಡೆಸುವ, ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕಿನ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಕರ್ನಾಟಕ ಸಹಿಸುವುದಿಲ್ಲ” ಎಂದು ಒಕ್ಕೂಟ ಎಚ್ಚರಿಸಿದೆ.

“ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ಒಕ್ಕೂಟದ ಆಗ್ರಹ. ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಗರಿಕ ಸಂಘಟನೆಗಳು, ಪ್ರಜಾಸತ್ತಾತ್ಮಕ ಶಕ್ತಿಗಳು, ಯುವಜನರು ಮತ್ತು ಮತದಾರರ ಹಕ್ಕುಗಳ ಪರ ಹೋರಾಡುವ ಎಲ್ಲ ಸಂಘಟನೆಗಳು ಕರ್ನಾಟಕದ ಎಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಅ.10 ರಂದು ಪಂಜಿನೊಂದಿಗೆ ಪ್ರತಿಭಟನಾ ಹಾಗೂ ಪ್ರತಿರೋಧ ಸಭೆಗಳನ್ನು ಆಯೋಜಿಸುವಂತೆ ಕರೆ ನೀಡುತ್ತದೆ” ಎಂದು ಹೇಳಿದೆ.

“ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ದಿಢೀರ್ ಹೋರಾಟಕ್ಕೆ ಸಹಕರಿಸಿದ ಎಲ್ಲ ನಾಗರಿಕ ಸಂಘಟನೆಗಳಿಗೆ ಮತ್ತು ವಿಶೇಷವಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಿದ ಯುವಜನರಿಗೆ ಒಕ್ಕೂಟ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತದೆ. ಎಸ್‌ಐಆರ್‌ನಿಂದ ಉಂಟಾಗಿರುವ ಸಮಸ್ಯೆಗಳ ವಿರುದ್ಧ ಯುವಜನರು ತೋರಿದ ಸ್ಪಂದನೆ ಮತ್ತು ಉತ್ಸಾಹವು ಮತದಾನದ ಹಕ್ಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಬಲವನ್ನು ನೀಡಿದೆ” ಎಂದು ಒಕ್ಕೂಟ ಹೇಳಿದೆ.

“ನಿನ್ನೆಯ ಹೋರಾಟದಲ್ಲಿ ನೂರಾರು ಎಸ್‌ಐಆರ್ ಸಂತ್ರಸ್ತರು ಭಾಗವಹಿಸಿದ್ದರು. ಆದರೆ, ಹೋರಾಟ ಅನಿರೀಕ್ಷಿತವಾಗಿ ಆಯೋಜನೆಯಾದ ಕಾರಣ ಸಂತ್ರಸ್ತರನ್ನು ಸೂಕ್ತ ರೀತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಒಕ್ಕೂಟ ವಿಷಾದ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಅನುಭವಗಳು, ಸಮಸ್ಯೆಗಳು ಮತ್ತು ಅವರ ನ್ಯಾಯದ ಬೇಡಿಕೆಗಳಿಗೆ ಹೋರಾಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದೇ ಆಶಯದೊಂದಿಗೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಲ್ಲಿ ಅಕ್ಟೋಬರ್ 15ರಂದು ದಿಲ್ಲಿಯಲ್ಲಿ ಆಯೋಜಿಸಲಾಗುತ್ತಿದೆ. ಕರ್ನಾಟಕದಲ್ಲಿ ಎಸ್‌ಐಆರ್‌ನಿಂದ ತೊಂದರೆಗೊಳಗಾಗಿರುವ ಎಲ್ಲ ಸಂತ್ರಸ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂತ್ರಸ್ತರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಮತದಾರರ ಹಕ್ಕುಗಳ ರಕ್ಷಣೆಯ ಹೋರಾಟವನ್ನು ಬಲಪಡಿಸಬೇಕು” ಎಂದು ಒಕ್ಕೂಟ ಮನವಿ ಮಾಡಿದೆ.

“ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದ ಉಂಟಾಗಿರುವ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ದೊರೆಯಬೇಕು. ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವ ಯಾವ ನಡೆಯನ್ನು ನಾವು ಸಹಿಸುವುದಿಲ್ಲ. ಎಸ್‌ಐಆರ್ ಸಂಪೂರ್ಣ ರದ್ದಾಗುವವರೆಗೆ, ಮತದಾನದ ಹಕ್ಕು ರಕ್ಷಿಸಲ್ಪಡುವವರೆಗೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ನ್ಯಾಯ ದೊರೆಯುವವರೆಗೆ ನಮ್ಮ ಪ್ರತಿರೋಧ ಮುಂದುವರಿಯಲಿದೆ” ಎಂದು ಒಕ್ಕೂಟ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ವಿವಾದ: ಅಕ್ಟೋಬರ್ 10ರಂದು ಮುಂಬೈನಲ್ಲಿ ತುಷಾರ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ; ದೇಶಾದ್ಯಂತ ಹೋರಾಟಕ್ಕೆ ಕರೆ

ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕೆಂಬ ಆಗ್ರಹದ ನಡುವೆಯೇ, ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್...

ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್‌ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್: ‘ನೊಣ ಕೊಲ್ಲಲು ಸುತ್ತಿಗೆ ಬಳಸಲು ಸಾಧ್ಯವಿಲ್ಲ’ ಎಂದ ನ್ಯಾ.ಸೂರ್ಯಕಾಂತ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ನಿರ್ಧಾರಕ್ಕೆ...

ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು

ಅಕ್ಟೋಬರ್ 10 ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 15 ವಿದ್ಯಾರ್ಥಿಗಳನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಜಂಕ್ಷನ್‌ನಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು...

‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ...

ಎಸ್‌ಐಆರ್ ವಿವಾದ: ಸಂವಿಧಾನ್ ಸದನದಲ್ಲಿ ಮಧ್ಯಾಹ್ನ ‘ಇಂಡಿಯಾ’ ಮೈತ್ರಿಕೂಟದ ಸಭೆ; ರಾತ್ರಿ 8 ಗಂಟೆಗೆ ರಾಷ್ಟ್ರಪತಿಗಳ ಭೇಟಿ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, 'ಇಂಡಿಯಾ' (INDIA) ಮೈತ್ರಿಕೂಟದ ನಾಯಕರು ಇಂದು ರಾತ್ರಿ...

ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ...

ಎಲಾನ್ ಮಸ್ಕ್ – ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್ ಲೈಸೆನ್ಸ್ ವಿಚಾರ ಜಾಗತಿಕ ಚರ್ಚೆಗೆ!

ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ವಿಶ್ವದ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಸಂಭಾಷಣೆಯು ದೇಶದ ರಾಜಕೀಯ ಮತ್ತು ಆರ್ಥಿಕ...

ಉತ್ತರ ಪ್ರದೇಶ| ಎಫ್‌ಐಆರ್ ದಾಖಲಿಸಲು ದಲಿತ ಮಹಿಳೆಗೆ ಸಹಾಯ; ತಾಯಿ-ಮಗಳ ಮೇಲೆ ಹಲ್ಲೆ

ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಜಗತ್‌ಪುರ ಪ್ರದೇಶದಲ್ಲಿ, ಮಹಿಳೆಯೊಬ್ಬರು ಹಾಗೂ ಅವರ 12 ವರ್ಷದ ಮಗಳ ಮೇಲೆ ಬುಧವಾರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗ್ರಾಮದ ಪ್ರಧಾನ್ ಹಾಗೂ ಆತನ ಇಬ್ಬರು ಪುತ್ರರ...

‘ವೋಟ್ ಚೋರಿ ಆಗುತ್ತಿದೆ ಎಂಬುದಕ್ಕೆ ಮೂರು ಸಾಕ್ಷಿಗಳಿವೆ; ಮೋದಿ-ಶಾ ಉತ್ತರಿಸಲಿ’: ಬೆಂಗಳೂರಿನಲ್ಲಿ ಧ್ರುವ್ ರಾಠೀ ಆಗ್ರಹ 

ಬೆಂಗಳೂರು: “ವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು” ಎಂದು ಜರ್ಮನಿಯಲ್ಲಿ ವಾಸವಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ...