HomeಅಂಕಣಗಳುKarnataka against SIRಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

- Advertisement -
- Advertisement -

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು.

ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ ಮುಖಂಡರು ಜಾಥಾವನ್ನು ಬರಮಾಡಿಕೊಂಡಿತು. ನಗರದ ಮಧ್ಯಭಾಗದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡು ಅಲ್ಲಿನ ಅಂಬೇಡ್ಕರ್ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾ ಕ್ರೀಡಾಂಗಣದ ಬಳಿಯಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೂರಾರು ಯುವಕರು ಬೈಕ್ ಜಾಥಾ ಆರಂಭಿಸಿದರು.

ಜಾಥಾ ಉದ್ಘಾಟನೆ ಮಾಡಿ ಮಾತನಾಡಿದ ಚಾಮರಸ ಮಾಲಿ ಪಾಟೀಲ್, ಮಹಮ್ಮದ್ ಶಾಲಂ, ಶ್ರೀನಿವಾಸ ರೆಡ್ಡಿ, ಎಂ ಆರ್ ಭೇರಿ, ಎಸ್ ಮಾರೆಪ್ಪ, ವಿಜಯರಾಣಿ, ಅಂಬಣ್ಣ ಆರೋಲಿಕರ್ SIR ಎಂಬ ಷಡ್ಯಂತ್ರವು ಹೀಗೆ ಎಲ್ಲಾ ಸಮುದಾಯದ ಬಡವರ ವಿರೋಧಿಯಾಗಿದೆ ಹಾಗೂ ಮಹಿಳೆಯರ ವಿರೋಧಿಯಾಗಿದೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಮಾಲಿ ಪಾಟೀಲ್ ಅವರು ಮಾತನಾಡಿ, ಈ ದೇಶದಲ್ಲಿ ನೂರಾರು ವರ್ಷಗಳಿಂದ ನೆಲೆಸಿರುವ ಜನರನ್ನು ನೀವು ಈ ದೇಶದ ನಾಗರಿಕತ್ವವನ್ನು ಸಾಬೀತುಪಡಿಸಿಕೊಳ್ಳಿ ಎಂದು ಹೇಳುವಂತಿದೆ ಈ SIR. ಇದು ಸರ್ವಾಧಿಕಾರದ ಮನೋಭಾವ. ಇನ್ನು ಚುನಾವಣಾ ಆಯೋಗವೂ ಕೂಡ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ನಂತರ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಯಚೂರು ವಿಧಾಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, SIR ಎನ್ನುವದು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಕರ್ನಾಟಕದ ಎಲ್ಲ ಜಾತಿ ಧರ್ಮಗಳ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳಲು ನಡೆಸುತ್ತಿರುವ ಕೃತ್ಯ ಎಂದು ಅಭಿಪ್ರಾಯಪಟ್ಟರು.

ರಾಯಚೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀನಿವಾಸ ರೆಡ್ಡಿ, SIR ಎಂಬ ಜನವಿರೋಧಿ ಪ್ರಕ್ರಿಯೆಯನ್ನು ವಿರೋಧಿಸಲು ಎಲ್ಲ ಸಂವಿಧಾನ ಪ್ರೇಮಿಗಳು ಒಂದಾಗಬೇಕೆಂದು ವಿನಂತಿ ಮಾಡಿದರು.

ಹಿರಿಯ ದಲಿತ ಹೋರಾಟಗಾರರಾದ ಎಂ.ಆರ್. ಭೇರಿ ಮಾತನಾಡುತ್ತಾ, ಈ SIR ಎಂಬ ಷಡ್ಯಂತ್ರಕ್ಕೆ ಮೊದಲು ಬಲಿಯಾಗುತ್ತಿರುವುದು ಈ ದೇಶದ ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರು.

ಮಹಿಳೆಯರು ಮದುವೆಯಾದ ನಂತರ ಗಂಡನ ಮನೆಗೆ ಬಂದಾಗ ಬೇರೊಂದು ಹೆಸರಿಟ್ಟುಕೊಳ್ಳುತ್ತಾರೆ. ಹೀಗಾಗಿ ಅವರ ದಾಖಲಾತಿಯಲ್ಲಿಯೇ ಬೇರೆ ಹೆಸರಿರುತ್ತದೆ, ಮತ ಪಟ್ಟಿಯಲ್ಲಿ ಬೇರೆಯದೇ ಹೆಸರಿರುತ್ತದೆ. ಹೀಗಾಗಿ ಮಹಿಳೆಯರು ಈ SIR ನಿಂದ ಹೆಚ್ಚು ಬಾದಿತರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್. ಮಾರೆಪ್ಪ ಅವರು ಮಾತನಾಡುತ್ತಾ, ಈ ದೇಶದಲ್ಲಿ ಬೀದಿ ಬೀದಿಗಳಲ್ಲಿ ಗುಡಿಸಲು ಹಾಕಿಕೊಂಡಿರುವ ಅಲೆಮಾರಿ ಜನರ ಬಳಿ ಯಾವ ದಾಖಲೆಗಳು ಇರುತ್ತವೆ. ಅವರ ತನ್ನ ಜೀವನವನ್ನು ನಡೆಸಲು ಊರೂರು ಅಲೆಯುತ್ತಾ ಭಿಕ್ಷೆ ಬೇಡುವವರು. ಅವರ ಬಳಿ ನಿಮ್ಮ ಶಾಲೆಗಳನ್ನು ತೂರಿಸಿ ಎನ್ನುವದು ನಿಜಕ್ಕೂ ಕ್ರೌರ್ಯ ಎಂದು ಅಭಿಪ್ರಾಯಪಟ್ಟರು.

ಹಿರಿಯ ಒಳಮೀಸಲಾತಿ ಹೋರಾಟಗಾರದ ಅಂಬಣ್ಣ ಆರೋಲಿಕರ್ ಮಾತನಾಡುತ್ತಾ, ಈ ದೇಶದಲ್ಲಿ ಸಂವಿಧಾನವನ್ನು ಜಾರಿಮಾಡಬೇಕಾದ ಸುಪ್ರೀಮ್ ಕೋರ್ಟ್ ಕೂಡಾ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಜನರು ಯಾರ ಬಳಿ ನ್ಯಾಯ ಕೇಳಲು ಹೋಗಬೇಕು, ಇದು ಈ ದೇಶದಲ್ಲಿ ಸರ್ವಾಧಿಕಾರ ಆಡಳಿತ ಜಾರಿಯಾಗಿದೆ ಎಂಬ ಸೂಚನೆಯಾಗಿದೆ. ಜನರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಜನವಿರೋಧಿ ನೀತಿಗಳ ವಿರುದ್ಧ ದೊಡ್ಡ ಆಂದೋಲನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಜಾಥಾದ ರಾಯಚೂರು ಜಿಲ್ಲೆಯ ಹೇಮರಾಜ್, ಜಾನ್ ವೆಸ್ಲಿ, ಆಸುಮುದ್ದಿನ ಅಕ್ತರ್, ಸಮ್ಮದ್ ಪಾಷಾ, ಫೈನಲ್ ಖಾನ್, ಮಾರಪ್ಪ ಹರವಿ, ಹಿಜಾಜಾ ಅಲಿ, ಗುರುರಾಜ್ ಪಾಟೀಲ್, ಲಕ್ಷ್ಮಣ್ ಮಂಡಲಗೇರಾ ಮುಂತಾದವರು ಭಾಗವಹಿಸಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...