HomeಅಂಕಣಗಳುKarnataka against SIRSIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

- Advertisement -
- Advertisement -

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ ‘SIR ವಿರೋಧಿ ಜನಜಾಗೃತಿ ಜಾಥಾ’ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು.

ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ ತಂಡವು, ಅಲ್ಲಿ ಯಶಸ್ವಿ ಪ್ರಚಾರ ಮತ್ತು ಸಭೆ ನಡೆಸಿತು. ನಂತರ ಆಲ್ದೂರಿಗೆ ತೆರಳಿ ಕರಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು. ಅಲ್ಲಿಂದ ಸಂಜೆ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ಜಾಥಾ ನೇತೃತ್ವದ ತಂಡವು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬಳಿಕ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿತು.

ರಕ್ತ ಕೊಟ್ಟೇವು, ಮತದಾನದ ಹಕ್ಕು ಕಳೆದುಕೊಳ್ಳುವುದಿಲ್ಲ: ಗೌಸ್ ಮೊಹಿದ್ದೀನ್ ಆಕ್ರೋಶ

ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರಾದ ಗೌಸ್ ಮೊಹಿದ್ದೀನ್, “ನಾವು ರಕ್ತ ಕೊಟ್ಟೇವು, ಆದರೆ ನಮ್ಮ ಮತದಾನದ ಹಕ್ಕನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳುವುದಿಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

“ಹಿಂದೆ ಮತದಾರರು ಸರ್ಕಾರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ, ಈಗ ಸರ್ಕಾರವೇ ತನಗೆ ಬೇಕಾದ ಮತದಾರರನ್ನು ಆಯ್ಕೆ ಮಾಡಿಕೊಳ್ಳುವಂತಹ ವಿಪರ್ಯಾಸದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ವೇಳೆ ನಾವು ಮತದಾನದ ಹಕ್ಕನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದರು.

ಪಶ್ಚಿಮ ಬಂಗಾಳದ ಉದಾಹರಣೆ ನೀಡಿದ ಅವರು, “ಅಲ್ಲಿ ಇದೇ ಕಾನೂನಿನಿಂದಾಗಿ ಸುಮಾರು 91 ಲಕ್ಷ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಭವಿಷ್ಯದಲ್ಲಿ ಅವರು ಈ ದೇಶದ ನಾಗರಿಕರಲ್ಲ ಎಂದರೆ ಅವರು ಎಲ್ಲಿಗೆ ಹೋಗಬೇಕು? ದೇಶದ ಮೂಲ ನಿವಾಸಿಗಳಾದ ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಈ ‘SIR’ ಅನ್ನು ಜಾರಿ ಮಾಡಲಾಗುತ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡು ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಬೇಕು ಹಾಗೂ ಜನಸಾಮಾನ್ಯರಲ್ಲಿ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು” ಎಂದು ಮನವಿ ಮಾಡಿದರು.

ಜೂನ್ 20ರ ಬೆಂಗಳೂರು ಸಮಾವೇಶಕ್ಕೆ ಕರೆ

ಇದೇ ವೇಳೆ ಮಾತನಾಡಿದ ನಾಯಕರು, ಬರುವ 20ನೇ ತಾರೀಖಿನಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು. ಆ ಮೂಲಕ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ದೇಶದ ನಾಗರಿಕರ ಶಕ್ತಿಯನ್ನು ತೋರ್ಪಡಿಸಿ, ತಕ್ಕ ಎಚ್ಚರಿಕೆ ನೀಡಬೇಕು ಎಂದು ಕರೆ ನೀಡಿದರು.

ಎಸ್‌ಐಆರ್ ವಿರೋಧಿ ಜಾಥಾವನ್ನು ಸ್ವಾಗತಿಸಿದ ಚಿಕ್ಕಮಗಳೂರು ಸಂಗಾತಿಗಳು

ಈ ಸಂದರ್ಭದಲ್ಲಿ ಸಿಪಿಐ ಮುಖಂಡರಾದ ರಾಧಾ ಸುಂದರೇಶ್, ಡಿಎಸ್ಎಸ್ ನಾಯಕರಾದ ಅಣ್ಣಯ್ಯ, ಮಂಜು, ಟಿಪ್ಪು ಸಮಿತಿಯ ರಾಜ್ಯಾಧ್ಯಕ್ಷರಾದ ಜಮ್ಶದ್ ಖಾನ್, ಮುನ್ನ ಕಡೂರು, ರಿಸ್ವನ್ ಖಾಲೀದ್ ಸೇರಿದಂತೆ ಪ್ರಮುಖ ಪ್ರಗತಿಪರ ಚಿಂತಕರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್ ಮುನ್ನ ಕಡೂರು, ರಾಮು ಕೌಳಿ, ಸಂದೀಪ್ ಸುಮಂತ್ ರಾಜೀವ್ ಸರೋಜ ಮತ್ತು ಪವಿತ್ರ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...