HomeಅಂಕಣಗಳುSIRಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

- Advertisement -
- Advertisement -

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. “ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ” ಎಂಬ ದೃಢ ಸಂಕಲ್ಪದೊಂದಿಗೆ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಮತ್ತು ‘ಎದ್ದೇಳು ಕರ್ನಾಟಕ’ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಜಾಥಾ ಆರಂಭಗೊಂಡಿದೆ. ಒಟ್ಟು 5 ಪ್ರಮುಖ ಮಾರ್ಗಗಳಲ್ಲಿ ಸಾಗುತ್ತಿರುವ ಈ ಕ್ರಾಂತಿಕಾರಿ ಜಾಥಾದಲ್ಲಿ, ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡ ‘ಮಾರ್ಗ 3’ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ.

ಶಿವಮೊಗ್ಗದ ಅಂಬೇಡ್ಕರ್ ಪ್ರತಿಮೆ ಬಳಿ ಅದ್ಧೂರಿ ಚಾಲನೆ

ಇಂದು ಬೆಳಿಗ್ಗೆ 8:30ಕ್ಕೆ ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಎದುರು ಜಾಥಾಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪ ಅವರು ಜಾಥಾವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜಪ್ಪ ಅವರು, “ಇಡೀ ದೇಶಾದ್ಯಂತ ಎಸ್‌ಐಆರ್ ಎಂಬ ಅಸ್ತ್ರವನ್ನು ಬಳಸಿಕೊಂಡು ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳಲು ಮತ್ತು ಜನರ ಅಸ್ತಿತ್ವವನ್ನೇ ಪ್ರಶ್ನಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಅಕ್ಷಮ್ಯ ಅಪರಾಧ. ಪ್ರತಿ 10 ವರ್ಷಕ್ಕೊಮ್ಮೆ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತದೆಯಾದರೂ, ಈಗ ಬದುಕಿರುವವರ ಮತಗಳನ್ನೇ ಡಿಲೀಟ್ ಮಾಡುತ್ತಿರುವುದು ರಾಜಕೀಯ ಲಾಭಕ್ಕಾಗಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು. ನಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪ್ರಬಲ ಪ್ರತಿರೋಧ ಅನಿವಾರ್ಯವಾಗಿದೆ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

“ಪ್ರಜಾಪ್ರಭುತ್ವದ ಅಡಿಪಾಯದ ಕಲ್ಲುಗಳನ್ನೇ ತೆಗೆಯುವ ಕೆಲಸ”

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಖ್ಯಾತ ಸಾಮಾಜಿಕ ಹೋರಾಟಗಾರ ಹಾಗೂ ವಕೀಲರಾದ ಕೆ.ಪಿ. ಶ್ರೀಪಾಲ್ ಅವರು, ಹಿರಿಯ ಸಾಹಿತಿ ದೇವನೂರು ಮಹಾದೇವ ಅವರ ಮಾತುಗಳನ್ನು ಸ್ಮರಿಸಿದರು. “ಪ್ರಜಾಪ್ರಭುತ್ವದ ತಳಪಾಯವೇ ಮತದಾನದ ಹಕ್ಕು. ಆದರೆ ಸರ್ಕಾರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವದ ಅಡಿಪಾಯದ ಕಲ್ಲುಗಳನ್ನೇ ಕಿತ್ತೆಸೆಯುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್‌ನಿಂದ ದೇಶದ ಜನಸಾಮಾನ್ಯರಿಗೆ ಎದುರಾಗಲಿರುವ ಭೀಕರ ಅನಾಹುತಗಳ ಬಗ್ಗೆ ಜನ ಈಗಲೇ ಎಚ್ಚೆತ್ತು, ಪಟ್ಟಿಯಿಂದ ಹೆಸರುಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು. BLA ಮೂಲಕ ಪಟ್ಟಿಗಳನ್ನು ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬೇಕು ಎಂದರು.

ಶಿವಮೊಗ್ಗದಲ್ಲಿ ಉದ್ಘಾಟನೆಹೊಂಡಿರುವ ಈ ಜಾಥಾವು ಒಟ್ಟು 5 ಮಾರ್ಗಗಳಲ್ಲಿ ಸಂಚರಿಸುತ್ತಿದ್ದು, ಪ್ರಮುಖವಾಗಿ ಮಾರ್ಗ 3ರ ಅಡಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗವನ್ನು ಬೆಸೆಯಲಿದೆ.

ಶಿವಮೊಗ್ಗದಿಂದ ಹೊರಡುವ ಜಾಥಾವು ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಶಿರಸಿ ಮತ್ತು ಭಟ್ಕಳವನ್ನು ಪ್ರವೇಶಿಸಿ ಜನಜಾಗೃತಿ ಮೂಡಿಸಲಿದೆ ಅಲ್ಲಿಂದ ಮುಂದುವರಿದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೃಹತ್ ರ‍್ಯಾಲಿಗಳ ಮೂಲಕ ಸಾಗಲಿದೆ.
ಎಲ್ಲಾ 5 ಮಾರ್ಗಗಳ ಜಾಥಾಗಳು ಜೂನ್ 20ರಂದು ಬೆಂಗಳೂರನ್ನು ತಲುಪಲಿದ್ದು, ಅಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ.

ದೇಶದ ಮತ್ತು ಸಂವಿಧಾನದ ಭವಿಷ್ಯವನ್ನು ಕಾಪಾಡಲು ಪ್ರತಿಯೊಬ್ಬ ನಾಗರಿಕರೂ ಜೂನ್ 20ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಈ ಹೋರಾಟವನ್ನು ಯಶಸ್ವಿಗೊಳಿಸಬೇಕಾಗಿ ಮುಖಂಡರು ಕರೆ ನೀಡಿದ್ದಾರೆ.

ಈ ಐತಿಹಾಸಿಕ ಜನಜಾಗೃತಿ ಚಾಲನಾ ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಕೆ.ಎಲ್. ಅಶೋಕ್, ದಲಿತ ಸಂಘರ್ಷ ಸಮಿತಿಯ (DSS) ಮುಖಂಡರಾದ ಬಸವಲಿಂಗಪ್ಪ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ರಾಘವೇಂದ್ರ, ಸುರೇಶ್ ಗಡಿಕಲ್, ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ವಾಹಬ್, ಆಪ್ತಾಪ್ ಪರ್ವೀಜ್, ಮುನ್ನ ಕಡೂರು ಸೇರಿದಂತೆ ಪ್ರಮುಖ ಹೋರಾಟಗಾರರು, ವಕೀಲರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಧ್ವನಿ ಎತ್ತಿದರು. ಕೆ ಎಲ್ ಅಶೋಕ್, ಸುರೇಶ್ ನಾಯಕ್ ಮತ್ತು ಮುನ್ನ ಕಡೂರು ರವರು ಜಾಥಾ ಮಾರ್ಗ- 3ರ ನೇತೃತ್ವವನ್ನು ವಹಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...