HomeಅಂಕಣಗಳುKarnataka against SIRಜೂನ್ 13 ರಿಂದ ಕರ್ನಾಟಕದಲ್ಲಿ 'SIR ವಿರೋಧಿ' ಜನಜಾಗೃತಿ ಜಾಥ

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

- Advertisement -
- Advertisement -

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ ಜೂನ್ 18 ರವರೆಗೆ ರಾಜ್ಯಾದ್ಯಂತ ಬೃಹತ್ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ರೈತ ಹೋರಾಟಗಾರ ಜೆ.ಎಂ. ವೀರಸಂಗಯ್ಯ ಹಾಗೂ ಎದ್ದೇಳು ಕರ್ನಾಟಕದ ಪದಾಧಿಕಾರಿ ಕೆ.ಎಲ್. ಅಶೋಕ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಇದು ಕರ್ನಾಟಕ, ಇಲ್ಲಿ ನಡೆಯದು ಯಾವುದೇ ದುಷ್ಟ ಆಟ” ಎಂಬ ಆಕರ್ಷಕ ಘೋಷಾವಾಕ್ಯದೊಂದಿಗೆ ಈ ಬೃಹತ್ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ತಲುಪುವ ಉದ್ದೇಶದಿಂದ ಈ ಜನಜಾಗೃತಿ ಅಭಿಯಾನವನ್ನು ಒಟ್ಟು ಐದು ಮಾರ್ಗಗಳಾಗಿ ವಿಭಜಿಸಲಾಗಿದೆ:

ಮಾರ್ಗ-1 (ಕಲ್ಯಾಣ ಕರ್ನಾಟಕ ಬಾಗ): ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ.

ಮಾರ್ಗ-2 (ಕಿತ್ತೂರು ಕರ್ನಾಟಕ ಭಾಗ): ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಹಾವೇರಿ.

ಮಾರ್ಗ-3 (ಮಲೆನಾಡು ಮತ್ತು ಮಧ್ಯ ಕರ್ನಾಟಕ): ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ.

ಮಾರ್ಗ-4 (ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳು): ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ.

ಮಾರ್ಗ-5 (ಕರಾವಳಿ ಮತ್ತು ಹಳೆ ಮೈಸೂರು ಭಾಗ): ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ.

ಚುನಾವಣಾ ಆಯೋಗ ಸರ್ಕಾರದ ಏಜೆಂಟನಂತೆ ವರ್ತಿಸುತ್ತಿದೆ

“ಇಂದಿನ ಚುನಾವಣಾ ಆಯೋಗವು ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಗಾಳಿಗೆ ತೂರಿ ಬಿಜೆಪಿ ಸರ್ಕಾರದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ” ಎಂದು ಹೋರಾಟಗಾರರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕನ್ನು ನೀಡಿದೆ. ಅದನ್ನು ಕಾಪಾಡುವುದು ಆಯೋಗದ ಆದ್ಯ ಕರ್ತವ್ಯ. ಮತದಾನದ ಹಕ್ಕು ಎಂಬುದು ಕೇವಲ ಆಡಳಿತಾತ್ಮಕ ವಿಷಯವಲ್ಲ, ಅದು ನಾಗರಿಕ ಸಮಾನತೆಯ ಪ್ರತೀಕ. ಆದರೆ ಆಯೋಗ ಇದನ್ನು ಮರೆತಿರುವುದು ದುರಂತ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

‘ಡಿಲಿಸ್ಟಿಂಗ್’ ಹೆಸರಲ್ಲಿ ಎರಡನೇ ದರ್ಜೆಯ ನಾಗರಿಕರ ಸೃಷ್ಟಿ?

ಎಸ್‌ಐಆರ್ ಜಾರಿಯಾದ ಇತರ ರಾಜ್ಯಗಳಲ್ಲಿ ಭೀಕರ ಅಕ್ರಮ ನಡೆದಿದ್ದು, ಸುಮಾರು 20 ಲಕ್ಷದಿಂದ ಹಿಡಿದು 3 ಕೋಟಿಯವರೆಗೆ ಅರ್ಹ ಮತದಾರರನ್ನು ಮತಪಟ್ಟಿಯಿಂದ ವ್ಯವಸ್ಥಿತವಾಗಿ ಹೊರಗಿಡಲಾಗಿದೆ. ಎಸ್‌ಐಆರ್ ಮೂಲಕ ಯಾವುದೇ ನುಸುಳುಕೋರರನ್ನು ಪತ್ತೆ ಹಚ್ಚುತ್ತಿಲ್ಲ, ಬದಲಿಗೆ ದೇಶದಲ್ಲೇ ಇರುವ ಒಂದು ನಿರ್ದಿಷ್ಟ ವರ್ಗದ ಮತದಾನದ ಹಕ್ಕನ್ನು ಕಸಿದುಕೊಂಡು, ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಹುನ್ನಾರ ಇದರಲ್ಲಿದೆ. ಆದರೆ ಶರಣರು, ಸೂಫಿಗಳು ಮತ್ತು ಸಂತರ ಈ ಪುಣ್ಯ ನಾಡಿನಲ್ಲಿ ಇಂತಹ ಯಾವುದೇ ದುಷ್ಟ ನೀತಿಗಳು ನಡೆಯಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಜಾಥಾದ ಪ್ರಮುಖ ಹಕ್ಕೊತ್ತಾಯಗಳು:

1. ಬೇರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿ ಎಸ್‌ಐಆರ್ ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.

2. ಮತದಾರರ ಪಟ್ಟಿಯಿಂದ ಹೆಸರು ಕಟ್‌ ಮಾಡಲು ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಅನ್ನು ಬಳಸಬಾರದು.

3. ಪ್ರತಿಯೊಂದು ಹಳ್ಳಿಯಲ್ಲಿ ಗ್ರಾಮ ಸಭೆಗಳನ್ನು ಕರೆದು, ಸಾರ್ವಜನಿಕ ಪರಿಶೀಲನೆ ನಡೆಸಿಯೇ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಬೇಕು.

4. ಮತದಾರರ ಪಟ್ಟಿಯನ್ನು ‘ಮಷಿನ್ ರೀಡಬಲ್ ಫಾರ್ಮ್ಯಾಟ್’ ಮೂಲಕ ಪ್ರಕಟಿಸಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು.

5. ಮನವಿ ಮತ್ತು ಆಕ್ಷೇಪಣೆ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಒದಗಿಸಲು ಸಾರ್ವಜನಿಕರಿಗೆ ಕನಿಷ್ಠ ಆರು ತಿಂಗಳ ಸುದೀರ್ಘ ಕಾಲಾವಕಾಶ ನೀಡಬೇಕು.

ಜೂನ್ 20 ಕ್ಕೆ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ

ಮತದಾನದ ಹಕ್ಕನ್ನು ದುರ್ಬಲಗೊಳಿಸುವ, ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಯಾವುದೇ ಪ್ರಯತ್ನಗಳನ್ನು ಕರ್ನಾಟಕದ ಪ್ರಜ್ಞಾವಂತ ಜನತೆ ಸಹಿಸುವುದಿಲ್ಲ. ರಾಜ್ಯ ಚುನಾವಣಾ ಆಯೋಗವು ನಾಗರಿಕ ಸಮಾಜಕ್ಕೆ ಉತ್ತರದಾಯಿಯಾಗಬೇಕು ಮತ್ತು ನಮ್ಮೆಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜೂನ್ 20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಒಕ್ಕೂಟದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...