HomeಅಂಕಣಗಳುKarnataka against SIRಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

- Advertisement -
- Advertisement -

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ ಬೈಕ್ ರ್ಯಾಲಿ ತಾಲೂಕು ಕೇಂದ್ರ ತಲುಪಿತು. ನಗರದ ಗಾಂಧಿ ಚೌಕದಲ್ಲಿ ಪ್ರಗತಿಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳು ಬಹಿರಂಗ ಸಭೆ ಆಯೋಜಿಸಿದ್ದವು.

ಸಭೆಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕಿನ ಹಿರಿಯ ಹೋರಾಟಗಾರ ನಗರಗೆರೆ ರಮೇಶ್‌, “ಪಶ್ಚಿಮ ಬಂಗಾಳದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಅಮರ್ತ್ಯ ಸೇನ್ ಅವರ ಹೆಸರನ್ನೇ ಬಿಡಲಿಲ್ಲ. ಅವರು ತಮಗೆ ಮತ ನೀಡುವುದಿಲ್ಲ ಎಂಬುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಕ್ಕೆ ಗೊತ್ತಿತ್ತು. ಅಂತವರ ಹೆಸರನ್ನೇ ಮತದಾರರ ಪಟ್ಟಿಯಿಂದ ತೆಗೆದವರು ನಮ್ಮ ಹೆಸರನ್ನು ಬಿಡುತ್ತಾರೆಯೇ” ಎಂದು ಪ್ರಶ್ನಿಸಿದರು.

“ನಿಮ್ಮ ಮನೆಗೆ ಬರುವ ಬಿಎಲ್‌ಒಗಳು ನಿಮ್ಮನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ಅದಕ್ಕೆ ಆಸ್ಪದ ಕೊಡಬೇಡಿ ಎಚ್ಚರಿಕೆಯಿಂದಿರಿ. ಬಿಜೆಪಿಗೆ ಮತ ನೀಡದವರ ಹಕ್ಕು ಕಸಿದುಕೊಳ್ಳಲು ಯತ್ನಿಸುತ್ತಿದ್ದಾರೆ, ಅದಕ್ಕೆ ಅವಕಾಶ ಮಾಡಿಕೊಡಬಾರದು” ಎಂದು ಜನರನ್ನು ಎಚ್ಚರಿಸಿದರು.

ನಂತರ, ಜಾಥಾ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ತಲುಪಿ ಅಲ್ಲಿಯೂ ಸಹ ಬಹಿರಂಗ ಸಭೆ ಮೂಲಕ ಎಸ್‌ಐಆರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ನಂತರ ಜಾಥಾ ಜಿಲ್ಲೆಯ ಗುಡಿಬಂಡೆ ಪಟ್ಟಣ ತಲುಪಿತು. ಜಾಥಾದಲ್ಲಿ ಸ್ಥಳೀಯ ಜನಪರ ಸಂಘನೆಗಳ ಮುಖಂಡರು ಭಾಗವಹಿಸಿ ಬೆಂಬಲ ನೀಡಿ ಎಸ್‌ಐಆರ್‌ ವಿರೋಧಿಸಿ ಘೋಷಣೆ ಕೂಗಿದರು.

ಜಾಥಾ ಬಾಗೇಪಲ್ಲಿ ತಲುಪಿದಾಗ ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳು ಅದ್ದೂರಿಯಾಗಿ ಸ್ವಾಗತ ಕೋರಿದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಎಸ್‌ಐಆರ್‌ ಕುರಿತು ಜಾಗೃತಿ ಮೂಡಿಸಲಾಯಿತು. ಬಳಿಕ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗ ಮಾನವ ಸರಪಳಿ ರಚಿಸುವ ಮೂಲಕ ಎಸ್‌ಐಆರ್‌ ಅನ್ನು ವಿರೋಧಿಸಲಾಯಿತು.

ಚಿಕ್ಕಬಳ್ಳಾಪುರದಲ್ಲಿ ಬಹಿರಂಗ ಸಭೆ ನಡೆಸುವ ಮೂಲಕ ಎಸ್‌ಐಆರ್‌ ವಿರೋಧಿ ಮೂರನೇ ದಿನದ ಜಾಥಾ ಶಿಡ್ಲಘಟ್ಟದಲ್ಲಿ ಕೊನೆಗೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...