ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರಿಂದ ಪಿಹೆಚ್‌ಡಿ ಪದವಿ ಸ್ವೀಕರಿಸಲು ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ನಿರಾಕರಿಸಿದ ಘಟನೆ ಬುಧವಾರ (ಆ.13) ತಿರುನಲ್ವೇಲಿಯಲ್ಲಿ ನಡೆದಿದೆ. ಇಲ್ಲಿನ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ (ಎಂಎಸ್‌ಯು) 32ನೇ ಘಟಿಕೋತ್ಸವ ಸಮಾರಂಭದಲ್ಲಿ, ಜೀನ್ ಜೋಸೆಫ್ ಎಂಬ ಸಂಶೋಧನಾ ವಿದ್ಯಾರ್ಥಿನಿ ರಾಜ್ಯಪಾಲರಿಂದ ಪದವಿ ಸ್ವೀಕರಿಸಲು ನಿರಾಕರಿಸಿದ್ದು, ಬದಲಾಗಿ ವಿವಿಯ ಉಪಕುಲಪತಿ ಚಂದ್ರಶೇಖರ್ ಅವರಿಂದ ಪದವಿ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ. ಜೀನ್ ಜೋಸೆಫ್ ಅವರು ಡಿಎಂಕೆ ನಾಗರಕೋಯಿಲ್ ಘಟಕದ ಉಪ ಕಾರ್ಯದರ್ಶಿ ಎಂ ರಾಜನ್ ಅವರ ಪತ್ನಿ ಎಂದು ವರದಿಯಾಗಿದೆ. … Continue reading ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!