Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...