Homeಮುಖಪುಟಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾಯ್ದೆ ಭಿನ್ನಮತ ದಮನಕ್ಕಲ್ಲ- ಜಸ್ಟಿಸ್‌ ಚಂದ್ರಚೂಡ್‌

- Advertisement -
- Advertisement -

ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದಾರೆ. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

‘ಸವಾಲಿನ ಕಾಲಘಟ್ಟದಲ್ಲಿ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್‌ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡುತ್ತ ಯುಎಪಿಎ, ಎನ್‌ಎಸ್‌ಎ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮೆರಿಕನ್‌ ಬಾರ್‌ ಅಸೋಸಿಯೇಷನ್‌ ಮತ್ತು ಇಂಡಿಯನ್‌ ಲಾ ಫರ್ಮ್ಸ್‌ಗಳು ಜಂಟಿಯಾಗಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಭಾರತದ ಜೈಲುಗಳಲ್ಲಿ ಖೈದಿಗಳು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗುವ ಸಮಸ್ಯೆ ಉದ್ಭವವಾಗಿತ್ತು. ಅತ್ಯಂತ ಜನ ನಿಬಿಡವಾದ ಜೈಲಿನ ಸೆಲ್‌ಗಳು ವೈರಸ್‌ ಹಾಟ್‌ಸ್ಫಾಟ್‌ ಆಗುವ ಸಾಧ್ಯತೆಯಿತ್ತು. ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಿ ಜೈಲಿನಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಸಿದೆ. ಜೈಲುಗಳ ಜನ ದಟ್ಟಣೆಯನ್ನು ಕಡಿಮೆ ಮಾಡಿ ಕನಿಷ್ಠ ಅಂತರವನ್ನು ಕಾಪಾಡುವಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯದ ಪಾತ್ರ ದೊಡ್ಡದಿದೆ ಎಂದು ಅವರು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

2016-2019ರ ಅವಧಿಯಲ್ಲಿ ಸುಮಾರು 5922 ಜನರ ವಿರುದ್ಧ UAPA ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರಲ್ಲಿ 138 ಜನರು ನಿರ್ದೋಶಿಗಳಾಗಿ ಜೈಲಿನಿಂದ ಹೊರ ಬಂದಿದ್ದಾರೆ ಎಂದು PTI ವರದಿ ಮಾಡಿದೆ.

ಇದನ್ನು ಓದಿ: ಪಾದ್ರಿ ಸ್ಟಾನ್ ಸ್ವಾಮಿ ಸಾವು: ಭಾರತದ ಮುಖ್ಯ ನ್ಯಾಯಾಧೀಶರಿಗೊಂದು ಬಹಿರಂಗ ಪತ್ರ

ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಹಕ್ಕನ್ನು ರಕ್ಷಿಸುವ ಮಹತ್ವದ ಹೊಣೆಗಾರಿಕೆ ದೇಶದ ಅತ್ಯುನ್ನತ ನ್ಯಾಯ ವ್ಯವಸ್ಥೆಯ ಮೇಲಿದ್ದು, ವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಯಾವತ್ತೂ ಬದ್ಧವಾಗಿದೆ ಎಂಬುದನ್ನು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಅರ್ನಬ್‌ ಗೋಸ್ವಾಮಿ vs ಮಹಾರಾಷ್ಟ್ರ ರಾಜ್ಯ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು ಒಂದೇ ಒಂದು ದಿನದ ಮಟ್ಟಿಗೆ ಪ್ರಜೆಗಳ ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಉಲ್ಲಂಘನೆಯಾದರೂ ಅದು ದೊಡ್ಡ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರು, ತಾವು ನೀಡುವ ತೀರ್ಪುಗಳು ಸಮಾಜದ ಮೇಲೆ ಗಾಢವಾದ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಂಗದ ಪ್ರಕ್ರಿಯೆಗಳನ್ನು ನಡೆಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿಯವರನ್ನು ಬಂಧಿಸಿದ್ದ UAPA ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...