Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...