Homeಮುಖಪುಟಕೊರೊನಾ ಕುರಿತ ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗದಿರಲಿ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ಕುರಿತ ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗದಿರಲಿ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು ಆಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...