Homeಮುಖಪುಟಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ: ಪ್ರಿಯಾಂಕ ಖರ್ಗೆ

ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ: ಪ್ರಿಯಾಂಕ ಖರ್ಗೆ

- Advertisement -
- Advertisement -

ಕರ್ನಾಟಕ ಸರಕಾರದ  ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ತಮಿಳುನಾಡಿನ ಸಿಎಂ ಸ್ಟಾಲಿನ್‌ ಅವರ ಪುತ್ರ ಹಾಗೂ ಸಚಿವ ಉದಯ್‌ ನಿಧಿ ಸ್ಟಾಲಿನ್‌ ಅವರು ನೀಡಿರುವ ಸನಾತನ ಧರ್ಮದ ಕುರಿತ ಹೇಳಿಕೆಗೆ ಬೆಂಬಲವನ್ನು ಸೂಚಿಸಿದ್ದಾರೆ.

ಉದಯ್ ನಿಧಿ ಹೇಳಿಕೆ ಕುರಿತ ವಿವಾದದ ಬಗ್ಗೆ ಮಾದ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ ಖರ್ಗೆ,  ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ ಎಂದು ಹೇಳಿದ್ದಾರೆ.

ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವರಾಗಿ ನಿಮಗೆ ಇರುವ ಘನತೆಯನ್ನು ಖಾತ್ರಿಪಡಿಸದ ಯಾವುದೇ ಧರ್ಮವು ಧರ್ಮವಲ್ಲ. ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಮತ್ತು ನಿಮ್ಮನ್ನು ಮನುಷ್ಯರಂತೆ ನೋಡಿಕೊಳ್ಳದ ಯಾವುದೇ ಧರ್ಮ ಅದು ಕಾಯಿಲೆಯಂತೆ ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ ಎಂದು  ಉದಯನಿಧಿ ಸ್ಟಾಲಿನ್  ಹೇಳಿದ್ದರು.

ಇದನ್ನು ಓದಿ: ಸನಾತನ ಧರ್ಮದ ಕುರಿತ ಉದಯ್ ನಿಧಿ ಹೇಳಿಕೆ: ಎಲ್ಲಾ ಪಕ್ಷಗಳಿಗೆ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ; ಕಾಂಗ್ರೆಸ್ 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...