Homeಕರ್ನಾಟಕಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ...

ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು ಗರಂ ಆಗಿದ್ದಾರೆ. ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸಿ.ಟಿ. ರವಿ ವಿರುದ್ಧ ಏಕವಚನದಲ್ಲೇ ಎಚ್ಚರಿಕೆ ನೀಡಲಾಗಿದೆ.

”ಚುನಾವಣೆ ಪ್ರಚಾರದಲ್ಲಿ ಸಿ.ಟಿ. ರವಿ ಎಲ್ಲಿಯಾದರೂ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆಕೊಟ್ಟಿದೆ.

ಕೆಲದಿನಗಳಿಂದ ಸಿ.ಟಿ. ರವಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿರುವುದು ವೀರಶೈವ ಲಿಂಗಾಯತ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದರು. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದರು.

ಸಿ.ಟಿ. ರವಿ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ”ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ಕರೆಕೊಟ್ಟಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪ್ರಕಟಣೆಯಲ್ಲಿ ಏನಿದೆ?

”ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ ‘ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ” ಎನ್ನುವ ಸಿಟಿ ರವಿ ಅವರ ಪತ್ರಿಕೆ ಹೇಳಿಕೆ ವಿರುದ್ಧವಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಕಟಣೆ ಹೊರಡಿಸಿದ್ದು, ”ಸಿ.ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ ‘ಕಿತ್ತೊದ ಸಿ, ಟಿ, ರವಿ’ ಅಂತ ಘೋಷಣೆ ಕೂಗಬೇಕು ಎಂದು ಕರೆ ಕೊಟ್ಟಿದೆ. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ ಸಮಾಜ ನೋಡಿದೆ. ನಮ್ಮ ಸಮಾಜ ಎಷ್ಟೇ ಒಡೆದರು. ಚುನಾವಣೆಯಲ್ಲಿ ಒಂದಾಗಿ ತಕ್ಕ ಪಾಠ ಕಲಿಸುತ್ತಿರುವುದು ನೆನಪಿಲ್ಲವೆ” ಎಂದು ಕೇಳಿದೆ.

”ವೀರಶೈವ ಲಿಂಗಾಯತ ಸಮಾಜ ತುಂಬಾ ಸೂಕ್ಷ್ಮ ಸಮಾಜ ಯಾರನ್ನು ಕೆಣಕಲು ಹೋಗಲ್ಲ, ಕಾಯಕವೇ ಕೈಲಾಸ ಎಂದು ತಿಳಿದು ತಮ್ಮ ಜೀವನ ನಡೆಸುತ್ತಿದೆ. ನಿನ್ನ ತರಹ ಜೀವನ ಮಾಡಲು ನಮಗೆ ಬರುವುದಿಲ್ಲ, ಒಂದು ಸಲ ಸಿಡಿದರೆ ನಿನ್ನಂತಹ ಸಾವಿರಾರು ವ್ಯಕ್ತಿಗಳನ್ನು ಮೂಗಿಸಿ ಹಾಕುವುದು ನಮಗೆ ಗೊತ್ತು” ಎಂದು ಎಚ್ಚರಿಕೆ ನೀಡಿದೆ.

”ಸಿಟಿ, ರವಿಯವರೆ, ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲಿಕ್ಕೆ ನಿನಗೆ ಏನು ನೈತಿಕತೆ ಇದೆ?” ಪ್ರಶ್ನೆ ಮಾಡಿದೆ.

”ಇಂತಹವರನ್ನು ಬಿಜೆಪಿ ಪಕ್ಷ ತಕ್ಷಣವೇ ಉಚ್ಚಾಟನೆ ಮಾಡಬೇಕು. ವೀರಶೈವ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದೆ ಹೋದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತವೆ. ಮಾನಸಿಕ ಅಸ್ವಸ್ತ ಸಿ, ಟಿ, ರವಿಯವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಎಚ್ಚರಿಕೆ ನೀಡುತ್ತಿದ್ದೆವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪಠ್ಯ ನ ಚಿತ್ರವಾಗಿರಬಹುದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...