HomeUncategorizedಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ 'ಸೆಕ್ರೆಟರಿಯೇಟ್ ಚಲೋ': ವಶಕ್ಕೆ ಪಡೆದ ಪೊಲೀಸರು

ಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ ‘ಸೆಕ್ರೆಟರಿಯೇಟ್ ಚಲೋ’: ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

‘ಸೆಕ್ರೆಟರಿಯೇಟ್‌ ಚಲೋ’ ನಡೆಸುತ್ತಿದ್ದ ಆಂಧ್ರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕ(ಎಪಿಸಿಸಿ) ದ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರನ್ನು ವಿಜಯವಾಡ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಮೆರವಣಿಗೆಗೆ ಅನುಮತಿ ಇರಲಿಲ್ಲ. ಈ ಕಾರಣಕ್ಕೆ ವೈ.ಎಸ್‌ ಶರ್ಮಿಳಾ, ಎಪಿಸಿಸಿ ಮುಖ್ಯಸ್ಥ ಜಿ ರುದ್ರರಾಜು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೇದೆಗಳು ಶರ್ಮಿಳಾ ಅವರನ್ನು ಬಲವಂತವಾಗಿ ಎಳೆದೊಯ್ದು ಪೊಲೀಸ್ ವಾಹನಕ್ಕೆ ಹತ್ತಿಸಿದ್ದು, ಈ ವೇಳೆ ಅವರ ಕೈಗಳಿಗೆ ಸ್ವಲ್ಪ ಗಾಯಗಳಾಗಿವೆ ಎಂದು ವರದಿಗಳು ಹೇಳಿವೆ. ರಾಜ್ಯದ ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಪರಿಹರಿಸುವಂತೆ ಶರ್ಮಿಳಾ ಅವರು ಗುರುವಾರ ಬೆಳಗ್ಗೆ ವಿಜಯವಾಡದಲ್ಲಿ’ಚಲೋ ಸೆಕ್ರೆಟರಿಯೇಟ್’ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ನಗರದ ಏಲೂರು ರಸ್ತೆಗೆ ಬರುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಶರ್ಮಿಳಾ ಮತ್ತು ಅವರ ಬೆಂಬಲಿಗರು ರಸ್ತೆಯಲ್ಲೇ ನಿಂತಿದ್ದರು.

“ಸಿಎಂ ಮತ್ತು ಅವರ ಸರ್ಕಾರ ನಮ್ಮ ಪ್ರತಿಭಟನೆಯಿಂದ ಹೆದರಿಕೊಂಡಿದೆ. ನಾನು ಸೆಕ್ರೆಟರಿಯೇಟ್‌ಗೆ ಹೋಗಿ ಯುವಕರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮಾತನಾಡಲು ಬಯಸುತ್ತೇನೆ. ಒಬ್ಬ ಮಹಿಳಾ ರಾಜಕಾರಣಿಯನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಖಂಡನೀಯ. ನಾನು ರಾಜಶೇಖರ ರೆಡ್ಡಿ ಅವರ ಮಗಳು, ಹೆದರುವವಲಲ್ಲ. ನನ್ನ ಹೋರಾಟ ಮುಂದುವರಿಸುತ್ತೇನೆ” ಎಂದು ವಿಜಯವಾಡದ ಮಂಗಳಗಿರಿ ಪೊಲೀಸ್ ಠಾಣೆಯ ಮುಂದೆ ಶರ್ಮಿಳಾ ಹೇಳಿದ್ದಾರೆ.

ಇಂದು ಸೆಕ್ರೆಟರಿಯೇಟ್‌ ಚಲೋ ನಡೆಸುವುದಾಗಿ ಶರ್ಮಿಳಾ ಘೋಷಿಸಿದ ಬಳಿಕ ಅವರನ್ನು ಪೊಲೀಸರು ಗೃಹ ಬಂಧನಲ್ಲಿಡುವ ಭೀತಿಯಿತ್ತು. ಈ ಹಿನ್ನೆಲೆ, ಶರ್ಮಿಳಾ ನಿನ್ನೆ(ಬುಧವಾರ) ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಭೀತಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಸಂಸದ ಕೆವಿಪಿ ರಾಮಚಂದ್ರ ರಾವ್ ಅವರ ಮನೆಗೆ ಭೇಟಿ ನೀಡುವುದನ್ನೂ ಶರ್ಮಿಳಾ ರದ್ದುಪಡಿಸಿದ್ದರು.

ಇಂದು (ಗುರುವಾರ) ಬೆಳಗ್ಗೆ ಪೊಲೀಸರು ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದಿದ್ದರಿಂದ, ಶರ್ಮಿಳಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಅಲ್ಲೇ ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಯಂತೆ 23,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಬೇಕು ಎಂದು ಶರ್ಮಿಳಾ ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಿಳಾ, “ಚುನಾವಣೆಗೆ ಎರಡು ತಿಂಗಳಿಗಿಂತ ಕಡಿಮೆ ಸಮಯವಿದೆ. ಈಗ 6,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಮೆಗಾ ಡಿಎಸ್ಸಿ (ನೇಮಕಾತಿಗಾಗಿ ಜಿಲ್ಲಾ ಆಯ್ಕೆ ಸಮಿತಿ) ನಡೆಸುವ ಬದಲು ಅವರು ದಗಾ (ವಂಚನೆ) ಡಿಎಸ್ಸಿ ಮಾಡುತ್ತಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತವು ಸರ್ವಾಧಿಕಾರದಂತಿದೆ. ಇದನ್ನು ಪ್ರತಿಭಟಿಸುವವರನ್ನು ಗೃಹ ಬಂಧನದಲ್ಲಿ ಇರಿಸಲಾಗುತ್ತಿದೆ ಎಂದು ಕಿಡಿಕಾರಿದರು.

“ಸಾವಿರಾರು ಪೊಲೀಸರು ನಮ್ಮನ್ನು ಸುತ್ತುವರಿದಿದ್ದಾರೆ. ನಮ್ಮ ಸುತ್ತಲೂ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಮ್ಮನ್ನು ಒತ್ತೆಯಾಳಾಗಿ ಇರಿಸಲಾಗಿದೆ. ನಿರುದ್ಯೋಗಿಗಳ ಪರ ನಿಂತರೆ ಬಂಧಿಸಲಾಗುತ್ತಿದೆ. ನೀವು ನಮ್ಮನ್ನು ತಡೆಯಲು ಬಯಸುವ ಸರ್ವಾಧಿಕಾರಿಗಳು. ಇದಕ್ಕೆ ನಿಮ್ಮ ನಡೆಗಳೇ ಸಾಕ್ಷಿ” ಎಂದು ಶರ್ಮಿಳಾ ಗುಡುಗಿದರು. ಕಾಂಗ್ರೆಸ್ ನಾಯಕರು ಮತ್ತು ಜನರು ಪ್ರತಿಭಟನೆ ನಡೆಸದಂತೆ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಪೊಲೀಸರು ತಡೆಯುವುದು ‘ಅಸಂವಿಧಾನಿಕ’ ಎಂದರು.

ದಿವಂಗತ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಜನವರಿ 16 ರಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಹಾಗೂ ಕಾನೂನು ಸುವ್ಯಸ್ಥೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತನ್ನ ಸಹೋದರನ ಸರ್ಕಾರದ ವಿರುದ್ದ ಶರ್ಮಿಳಾ ಸಮರ ಸಾರಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಮೊದಲ ಬಾರಿಗೆ ಸೆಕ್ರೆಟರಿಯೇಟ್‌ ಚಲೋ ಎಂಬ ಹೆಸರಿನಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದಾರೆ.

ಇದನ್ನೂ ಓದಿ: ಗೃಹ ಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ವೈಎಸ್‌ ಶರ್ಮಿಳಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...