Homeಕರ್ನಾಟಕರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಬೆಳಗಾವಿಯ ರಾಜಶ್ರೀ ನಾಗರಾಜ ಎಂಬವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಶ್ರೀ ನಾಗರಾಜ ಅವರು ಬೆಳಗಾವಿ ನಿವಾಸಿಯಾಗಿದ್ದು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿ ಅಪ್ರಾಪ್ತ ಮಕ್ಕಳು, ಪೋಷಕರು ಹಾಗೂ ಶಿಕ್ಷಣಾಧಿಕಾರಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟಿಗೆ ವಿಶೇಷ ಅರ್ಜಿಯನ್ನು ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ  4 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಘೋಷಿಸಲಾಗಿದೆ. ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರೊಂದಿಗೆ ಇವರ ಪೋಷಕರು ಕೂಡ ಪ್ರಯಾಣ ಮಾಡುವ ಸಾಧ್ಯತೆಯಿದೆ. ರಾಜ್ಯಾದ್ಯಂತ 3 ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಕೇಂದ್ರದಲ್ಲೂ 500 ಕ್ಕೂ ವಿದ್ಯಾರ್ಥಿಗಳಿರಲಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಮಾರ್ಗಸೂಚಿಗಳನ್ನು ಪಾಲಿಸಿ, ಎಚ್ಚರಿಕೆ ವಹಿಸಿದರೂ ಅಪಾಯದ ಭೀತಿ ಇರುತ್ತದೆ. ಇದು ಅಪ್ರಾಪ್ತರ ಬದುಕುವ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅವರು ಆರೋಪಿಸಿದ್ದಾರೆ.


ಓದಿ:  ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ


ಈ ಅಂಶಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪರಿಗಣಿಸಲು ನಿರಾಕರಿಸಿದೆ, ಅದ್ದರಿಂದ ಪರೀಕ್ಷಾ ವೇಳಾಪಟ್ಟಿಗೆ ತಡೆ ನೀಡಲು ನಿರಾಕರಿಸಿ ಹೈಕೋರ್ಟ್ ಮೇ 27ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜೂ. 25ಕ್ಕೆ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸದಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು.ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಮತ್ತು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಿ ಅಂತಿಮ ಫಲಿತಾಂಶ ನೀಡುವಂತೆ ನಿರ್ದೇಶನ ನೀಡಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.

ಇಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕೇಂದ್ರದ ಗೃಹ ಇಲಾಖೆ ಮತ್ತು ರಾಜ್ಯ ಹೈಕೋರ್ಟ್ ಕೂಡಾ ಪರೀಕ್ಷೆ ನಡೆಸಲು ಹಸಿರು ನಿಶಾನೆ ನೀಡಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿರುವುದರಿಂದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸರ್ಕಾರ SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ತೀರ್ಮಾನ ಕೈಗೊಂಡಿದ್ದಾರೆ.

ನರೆಯ ತೆಲಂಗಾಣ ರಾಜ್ಯ ಕೂಡಾ ಇದೇ ತೀರ್ಮಾನ ತೆಗೆದುಕೊಂಡಿದೆ.


ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...