Homeಮುಖಪುಟ370 ನೇ ವಿಧಿ ರದ್ದು ಕುರಿತ ಅರ್ಜಿಗಳ ತುರ್ತು ವಿಚಾರಣೆ ಕೋರಿ ಸುಪ್ರೀಂಗೆ ಮನವಿ

370 ನೇ ವಿಧಿ ರದ್ದು ಕುರಿತ ಅರ್ಜಿಗಳ ತುರ್ತು ವಿಚಾರಣೆ ಕೋರಿ ಸುಪ್ರೀಂಗೆ ಮನವಿ

"ಸಲ್ಲಿಸಲಾಗಿರುವ ಅರ್ಜಿಗಳನ್ನು ಆಲಿಸದಿದ್ದರೆ ಮತ್ತು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಪ್ರಸ್ತುತ ವಿಚಾರಣೆಯ ಉದ್ದೇಶವು ಹಾಳಾಗುತ್ತದೆ" ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೋರಿ ಸಜಾದ್ ಲೋನ್ ನೇತೃತ್ವದ ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.

ತಮ್ಮ ಪಕ್ಷದ ಪರವಾಗಿ ಅರ್ಜಿಯನ್ನು ಸಲ್ಲಿಸಿದ ಪೀಪಲ್ಸ್ ಕಾನ್ಫರೆನ್ಸ್ ವಕ್ತಾರ ಅದ್ನಾನ್ ಅಶ್ರಫ್ ಮಿರ್, ಕೇಂದ್ರವು ಕೈಗೊಂಡ ಬದಲಾವಣೆಗಳು ಜಮ್ಮು ಕಾಶ್ಮೀರದ ನಾಗರಿಕ ಹಕ್ಕುಗಳ ಮೇಲೆ ಸರಿಪಡಿಸಲಾಗದ ಪರಿಣಾಮವನ್ನು ಬೀರಿದೆ ಎಂದಿದ್ದಾರೆ.

ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಭೂ ಕಾನೂನುಗಳನ್ನು ಗೃಹ ಸಚಿವಾಲಯ ಕಳೆದ ತಿಂಗಳು ಸೂಚಿಸಿತ್ತು. ಇದರಿಂದಾಗಿ ಯಾವುದೇ ಭಾರತೀಯ ಪ್ರಜೆಗೆ ಈ ಪ್ರದೇಶದಲ್ಲಿ ಭೂಮಿ ಖರೀದಿಸಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: 370 ನೇ ವಿಧಿಯ ಮರುಸ್ಥಾಪನೆಗೆ ’ಪೀಪಲ್ಸ್ ಅಲಯನ್ಸ್’!

“ಸಲ್ಲಿಸಲಾಗಿರುವ ಅರ್ಜಿಗಳನ್ನು ಆಲಿಸದಿದ್ದರೆ ಮತ್ತು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಪ್ರಸ್ತುತ ವಿಚಾರಣೆಯ ಉದ್ದೇಶವು ಹಾಳಾಗುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಪೀಪಲ್ಸ್‌ ಅಲಯನ್ಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿಯನ್ನು ಸಲ್ಲಿಸಿದ ನಂತರ ಟ್ವೀಟ್ ಮಾಡಿದ್ದಾರೆ.

ಆರು ಪಕ್ಷಗಳ ಒಕ್ಕೂಟವಾದ ”ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲೇರ್‌” ಶನಿವಾರ ಸಭೆ ನಡೆಸಿ ಜಮ್ಮು ಕಾಶ್ಮೀರದ 20 ಜಿಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿತು.

ಜಮ್ಮು ಕಾಶ್ಮೀರ ಜೂನ್ 2018 ರಿಂದ ಕೇಂದ್ರ ಸರ್ಕಾರದ ಆಡಳಿತದಲ್ಲಿದೆ. 370 ನೇ ವಿಧಿ ಅನ್ವಯ ನೀಡಿದ್ದ ರಾಜ್ಯದ ವಿಶೇಷ ಸ್ಥಾನಮಾನವನ್ನು 2019 ರ ಆಗಸ್ಟ್‌ನಲ್ಲಿ ಸಂಸತ್ತು ರದ್ದುಪಡಿಸಿತ್ತು. ನಂತರ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ವಿಶೇಷಾಧಿಕಾರದ ರದ್ದುಗೊಳಿಸುವಿಕೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಸುಪ್ರೀಂ ಕೋರ್ಟ್ ಬಾಕಿ ಇದೆ.


ಇದನ್ನೂ ಓದಿ:  ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...