Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...