Homeಮುಖಪುಟನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

- Advertisement -
- Advertisement -

ಆಪಲ್ ಮೊಬೈಲ್ ಕಂಪನಿಯು ಕನಿಷ್ಟ ಇಬ್ಬರು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಅವರ ಐಫೋನ್‌ಗಳನ್ನು ಪ್ರಾಯೋಜಿತ ದಾಳಿಕೋರರು ಹ್ಯಾಕ್ ಮಾಡಿರಬಹುದು ಎಂದು ಎಚ್ಚರಿಕೆ ನೀಡಿದೆ.

ತೃಣಮೂಲ ಕಾಂಗ್ರೆಸ್ ಲೋಕಸಭಾ ಸಂಸದ ಮಹುವಾ ಮೊಯಿತ್ರಾ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಪವನ್ ಖೇರಾ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಸಂದೇಶ ಸ್ವೀಕರಿಸಿದ್ದರ ಬಗ್ಗೆ ಬರೆದಿದ್ದಾರೆ.

ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಸರನ್ ಮತ್ತು ಡೆಕ್ಕನ್ ಕ್ರಾನಿಕಲ್ ರೆಸಿಡೆಂಟ್ ಎಡಿಟರ್ ಶ್ರೀರಾಮ್ ಕರ್ರಿ ಅವರು ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು. ಅದರ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಸೀತಾರಾಂ ಯೆಚೂರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಸ್ವತಂತ್ರ ಪತ್ರಿಕೋದ್ಯಮ ರೇವತಿಗೂ ಈ ಎಚ್ಚರಿಕೆ ಸಂದೇಶ ಬಂದಿದೆ. ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಅವರು, ”ಕಳೆದ ಕೆಲವು ದಿನಗಳಿಂದ ಅವರುಗಳ ಫೋನ್ ಬ್ಯಾಟರಿಯಿಂದ ಬೇಗ ಖಾಲಿಯಾಗುತ್ತಿದೆ ಮತ್ತು ವಿಚಿತ್ರವಾಗಿ ವರ್ತಿಸುತ್ತಿದೆ. ಇದು ಮೊದಲ ಬಾರಿ ಅಲ್ಲ!” ಎಂದು ತಿಳಿಸಿದ್ದಾರೆ.

ಓವೈಸಿಯನ್ನು ಹೊರತುಪಡಿಸಿ ಇನ್ನುಳಿದ ರಾಜಕೀಯ ನಾಯಕರು ವಿರೋಧ ಪಕ್ಷಗಳ ಒಕ್ಕೂಟ INDIAಗೆ  ಸೇರಿದವರು. ಇವರೆಲ್ಲ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ.

”ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಿಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೊಫೋನ್ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ” ಎಂದು ಅವರಿಗೆ ಬಂದಿರುವ ಸಂದೇಶಗಳು ಎಚ್ಚರಿಕೆ ನೀಡಿವೆ.

ಅಧಿಸೂಚನೆಯಲ್ಲಿ, ”ಈ ರೀತಿ ನಿಮ್ಮ ಮೊಬೈಲ್‌ ಹ್ಯಾಕ್ ಮಾಡಲು ಸಾಧ್ಯವಿರುವಾಗ ಇದು ತಪ್ಪು… ಈ ಎಚ್ಚರಿಕೆಯನ್ನು ದಯವಿಟ್ಟು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಹೇಳಲಾಗಿದೆ.

ಆಪಲ್ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದ್ದೇನೆ?

”ಸಾಂಪ್ರದಾಯಿಕ ಸೈಬರ್ ಅಪರಾಧಿಗಳಿಗಿಂತ ಇದು ಭಿನ್ನವಾಗಿದೆ. ರಾಜ್ಯ ಪ್ರಾಯೋಜಿತ ದಾಳಿಕೋರರು ಕಡಿಮೆ ಸಂಖ್ಯೆಯ ನಿರ್ದಿಷ್ಟ ವ್ಯಕ್ತಿಗಳು ಮತ್ತು ಅವರ ಸಾಧನಗಳನ್ನು ಗುರಿಯಾಗಿಸುತ್ತಾರೆ. ಹ್ಯಾಕ್ ಮಾಡಲು ಅಸಾಧಾರಣ ಸಂಪನ್ಮೂಲಗಳನ್ನು ಬಳಸುತ್ತಾರೆ. ಈ ದಾಳಿಗಳನ್ನು ಪತ್ತೆಹಚ್ಚಲು ಮತ್ತು ತಡೆಯುವುದು ತುಂಬಾ ಕಷ್ಟಕರವಾಗುತ್ತದೆ. ರಾಜ್ಯ-ಪ್ರಾಯೋಜಿತ ದಾಳಿಗಳು ಹೆಚ್ಚು ಸಂಕೀರ್ಣವಾಗಿವೆ” ಎಂದು ಹೇಳಿದೆ.

ಇದನ್ನೂ ಓದಿ: ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

0
ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಇಲಾಖೆಗಳು ಅಗತ್ಯವಿಲ್ಲ, ಅವುಗಳನ್ನು ಮುಚ್ಚಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಸಿಬಿಐ ಮತ್ತು...