Homeಮುಖಪುಟಸರ್ಕಾರಿ ಉದ್ಯೋಗಕ್ಕೆ ಎರಡು ಮಕ್ಕಳ ನಿಯಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಸರ್ಕಾರಿ ಉದ್ಯೋಗಕ್ಕೆ ಎರಡು ಮಕ್ಕಳ ನಿಯಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಒಬ್ಬ ಅಭ್ಯರ್ಥಿಯು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸಾರ್ವಜನಿಕ ಹುದ್ದೆಗೆ ಅರ್ಜಿ ಸಲ್ಲಿಸುವುದನ್ನು ತಡೆಯುವ ರಾಜಸ್ಥಾನ ಸರ್ಕಾರದ 2001ರ ನಿಯಮಾವಳಿಗಳ ವಿರುದ್ಧದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

2003ರ ನಿರ್ಧಾರವು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ವರ್ಗೀಕರಣವು ತಾರತಮ್ಯವಲ್ಲ. ಈ ನಿಬಂಧನೆಯ ಹಿಂದಿನ ಉದ್ದೇಶವು ಕುಟುಂಬ ಯೋಜನೆಯನ್ನು ಉತ್ತೇಜಿಸುತ್ತದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ ಹಾಗೂ ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠ ರಾಜಸ್ಥಾನ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ತಿರಸ್ಕರಿಸಿದೆ.

2017ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದ ಯೋಧ ರಾಮಲಾಲ್ ಜಾಟ್, 2018ರ ಮೇ 25ರಂದು ರಾಜಸ್ಥಾನ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ರಾಜಸ್ಥಾನ ಪೊಲೀಸ್ ಸಬಾರ್ಡಿನೇಟ್ ಸರ್ವೀಸಸ್ ರೂಲ್ಸ್-1989ರ ನಿಯಮ 24 (4) ಅನ್ವಯ ಇವರ ಅರ್ಜಿ ತಿರಸ್ಕೃತಗೊಂಡಿತ್ತು. ಈ ನಿಯಮದ ಪ್ರಕಾರ, 2002ರ ಜೂನ್ 1ರ ಬಳಿಕ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದವರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಿಸಿಕೊಳ್ಳಲು ಅವಕಾಶ ಇರುವುದಿಲ್ಲ.

ರಾಜ್ಯದಲ್ಲಿ ಪೊಲೀಸರ ನೇಮಕಾತಿ ನಿಯಮಗಳು 2001ರ ನಿಯಮಾವಳಿಗಳಿಗೆ ಒಳಪಟ್ಟಿರುವುದನ್ನು ಗಮನಿಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಸರ್ಕಾರಿ ಉದ್ಯೋಗಗಳಿಗೆ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು 2001ರ ರಾಜಸ್ಥಾನದ ವಿವಿಧ ಸೇವಾ (ತಿದ್ದುಪಡಿ) ನಿಯಮಗಳ ಅಡಿಯಲ್ಲಿ ನೇಮಕಾತಿಗೆ ಅರ್ಹರಾಗಿರುವುದಿಲ್ಲ.

ರಾಜಸ್ಥಾನ ಪಂಚಾಯತ್ ರಾಜ್ ಕಾಯಿದೆ 1994ರ ಪ್ರಕಾರ ಒಬ್ಬ ವ್ಯಕ್ತಿಯು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ನಿಯಮವನ್ನು 2003ರಲ್ಲಿ ಜಾವೇದ್ Vs ರಾಜಸ್ಥಾನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...