Homeಕರ್ನಾಟಕನಾಳೆಯಿಂದಲೇ 'ಗೃಹಲಕ್ಷ್ಮಿ ಯೋಜನೆ'ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

ನಾಳೆಯಿಂದಲೇ ‘ಗೃಹಲಕ್ಷ್ಮಿ ಯೋಜನೆ’ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರದ 5ಗ್ಯಾರಂಟಿ ಯೋಜನೆಗಳಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಲಾಭ ಪಡೆಯಲು ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಹೆಗ್ಗುರುತು ಎಂದಿರುವ ಸರ್ಕಾರ, ಪ್ರತಿ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ಮಾಸಿಕ 2,000 ಗಳನ್ನು ನೇರವಾಗಿ ಜಮಾ ಮಾಡಲಿದೆ.

ಅರ್ಜಿಗಳನ್ನು ಅನ್‌ಲೈನ್‌ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್‌ ಇಲ್ಲವೇ ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್‌ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ”ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನಾಳೆ ಮಧ್ಯಾಹ್ನ 1.30ಕ್ಕೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜಭವನದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

”ಶುಕ್ರವಾರದಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

”ಆಗಸ್ಟ್ 18ರಂದು ಅಕೌಂಟ್‌ಗೆ ಹಣ ಹಾಕುವ ಯೋಜನೆಗೆ ಚಾಲನೆ ನೀಡಲಾಗುವುದು. ಅರ್ಜಿ ಸಲ್ಲಿಕೆ ಬಗ್ಗೆ ಯಾವುದೇ ಅನುಮಾನ ಇದ್ದರೂ 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು” ಎಂದರು.

”ಪತಿ ತೆರಿಗೆ ಕಟ್ಟುತ್ತಿದ್ದರೆ ಅವರ ಪತ್ನಿಯರು ಈ ಯೋಜನೆಗೆ ಅರ್ಹರಾಗುವುದಿಲ್ಲ, ಅರ್ಜಿ ಸ್ವೀಕಾರ ಆಗುವುದಿಲ್ಲ, ಇ-ಗವರ್ನೆನ್ಸ್ ಮೂಲಕ ಅರ್ಜಿ ಸ್ವೀಕರಿಸುತ್ತಿರುವ ಕಾರಣ ಅನರ್ಹವಾಗಿ ಯೋಜನೆಯ ಲಾಭ ಪಡೆಯಲು ಪ್ರಯತ್ನಿಸಿದರೆ ಸುಲಭವಾಗಿ ತಿಳಿಯಲಿದೆ” ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿಗಳಾಗಲು ಯಾರು?

ಪ್ರತಿ ಕುಟುಂಬದಲ್ಲಿ ಒಬ್ಬರು ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಅತ್ತೆ-ಸೊಸೆ ಇದ್ದಾಗ ಇಬ್ಬರಲ್ಲಿ ಮನೆ ಯಜಮಾನಿ ಯಾರು ಎಂದು ನಿರ್ಧರಿಸಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು:

1) ವಾಸಸ್ಥಳ ಪ್ರಮಾಣಪತ್ರ

2) ಮೊಬೈಲ್ ಸಂಖ್ಯೆ

3) 2 ಪಾಸ್‌ಪೋರ್ಟ್ ಗಾತ್ರದ ಫೋಟೊ

4) ಬ್ಯಾಂಕ್ ಪಾಸ್‌ಬುಕ್ ನಕಲು

5) ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ (ವಿಳಾಸ ದೃಢೀಕರಣಕ್ಕೆ)

6) ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ (ವೈಯಕ್ತಿಕ ದೃಢೀಕರಣಕ್ಕೆ)

7) ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ವಿಧಾನ :

ಯೋಜನೆಯ ಪುಟದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ, ಗೃಹಲಕ್ಷ್ಮಿ ಯೋಜನೆ ನಮೂನೆ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಬೇಕು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಮೃತ್ಯು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಪುತ್ರ ಕೈಸರ್‌ಗಂಜ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ...