Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...