Homeಮುಖಪುಟಉಪಮುಖ್ಯಮಂತ್ರಿ ನೇಮಕ ಸಂವಿಧಾನ ಬಾಹಿರವಲ್ಲ: ಸುಪ್ರೀಂ ಕೋರ್ಟ್

ಉಪಮುಖ್ಯಮಂತ್ರಿ ನೇಮಕ ಸಂವಿಧಾನ ಬಾಹಿರವಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ರಾಜ್ಯಗಳಲ್ಲಿ ಉಪಮುಖ್ಯಮಂತ್ರಿ ನೇಮಕ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅರ್ಜಿಯನ್ನು ತಿರಸ್ಕರಿಸಿದೆ.

‘ಪಕ್ಷ ಅಥವಾ ಅಧಿಕಾರದಲ್ಲಿರುವ ಪಕ್ಷಗಳ ಒಕ್ಕೂಟದಲ್ಲಿ ಹಿರಿಯ ನಾಯಕರಿಗೆ ಸ್ವಲ್ಪ ಹೆಚ್ಚಿನ ಪ್ರಾಮುಖ್ಯತೆ ನೀಡಲು ಹಲವು ರಾಜ್ಯಗಳಲ್ಲಿ ಉಪಮುಖ್ಯಮಂತ್ರಿ ನೇಮಕ ಮಾಡುವ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

‘ನೀವು ಯಾರನ್ನಾದರೂ ಉಪಮುಖ್ಯಮಂತ್ರಿ ಎಂದು ಕರೆದರೂ ಅದು ಇನ್ನೂ ಸಚಿವ ಸ್ಥಾನವೆಂದೆ ಉಲ್ಲೇಖವಾಗಿದೆ; ಉಪಮುಖ್ಯಮಂತ್ರಿ ರಾಜ್ಯ ಸರ್ಕಾರದಲ್ಲಿ ಮೊದಲ ಮತ್ತು ಪ್ರಮುಖ ಸಚಿವರು. ಇದು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ವಿಚಾರಣೆಯ ವೇಳೆ ಹೇಳಿದರು.

‘ಉಪಮುಖ್ಯಮಂತ್ರಿಗೆ ಯಾವುದೇ ಸಂವಿಧಾನಕ ಹುದ್ದೆಯನ್ನು ನೀಡುವುದಿಲ್ಲ; ಇದು ಸಂವಿಧಾನದ 14 (ಸಮಾನತೆಯ ಹಕ್ಕು) ಅನ್ನು ಉಲ್ಲಂಘಿಸುತ್ತದೆ’ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಇದು ತಪ್ಪು ಉದಾಹರಣೆಯಾಗಿದೆ ಎಂದು ಹೇಳಿ, ಅಂತಹ ನೇಮಕಾತಿಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ರಾಜ್ಯದ ಮುಖ್ಯಮಂತ್ರಿಗೆ ಸಹಾಯ ಮಾಡಲು ಮತ್ತು ಹಿರಿಯ ಸಮ್ಮಿಶ್ರ ನಾಯಕರನ್ನು ಸಂಪುಟದಲ್ಲಿ ಇರಿಸಿಕೊಳ್ಳಲು ಉಪಮುಖ್ಯಮಂತ್ರಿಗಳನ್ನು ಹೆಚ್ಚಾಗಿ ನೇಮಿಸಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಒಬ್ಬರಿಗಿಂತ ಹೆಚ್ಚು ಉಪಮುಖ್ಯಮಂತ್ರಿಗಳಿದ್ದರೆ, ಕೆಲವು ರಾಜ್ಯಗಳಲ್ಲಿ ಯಾರೂ ಇಲ್ಲ. ಆಂಧ್ರಪ್ರದೇಶದಲ್ಲಿ ಐದು ಜನ ಉಪ ಮುಖ್ಯಮಂತ್ರಿಗಳಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಯು ಕ್ಯಾಬಿನೆಟ್ ಮಂತ್ರಿಯ ಹುದ್ದೆಗೆ ಸಮನಾಗಿದ್ದು, ಅದೇ ರೀತಿಯ ವೇತನ ಮತ್ತು ಸವಲತ್ತುಗಳನ್ನು ಅನುಭವಿಸುತ್ತಾರೆ.

ಇದನ್ನೂ ಓದಿ; ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...