Homeಕರ್ನಾಟಕವಿರೋಧ ಪಕ್ಷಗಳ ಜತೆಗಿನ ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ನೇಮಕ: ಲಿಂಬಾವಳಿ ಆರೋಪ

ವಿರೋಧ ಪಕ್ಷಗಳ ಜತೆಗಿನ ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ನೇಮಕ: ಲಿಂಬಾವಳಿ ಆರೋಪ

- Advertisement -
- Advertisement -

”ವಿರೋಧ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕರಾಗಿ ಆರ್. ಅಶೋಕ್ ನೇಮಕಗೊಂಡಿದ್ದಾರೆ” ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆರ್.ಅಶೋಕ ಮತ್ತು ಬಿ.ವೈ.ವಿಜಯೇಂದ್ರ ವಿರೋಧ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಹೊಂದಾಣಿಕೆಯಿಂದಲೇ ಅವರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನೂ ಗೆಲ್ಲಿಸಬಹುದು. ಹಾಗಾಗಿ ಅವರನ್ನು ನೇಮಕ ಮಾಡಲಾಗಿದೆ” ಎಂದು ಹೇಳಿದ್ದಾರೆ.

”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ 66 ಶಾಸಕರಲ್ಲಿ ಕೆಲವರು ಸ್ವಂತ ಶಕ್ತಿ ಮೇಲೆಯೇ ಗೆದ್ದಿದ್ದಾರೆ. ಇನ್ನೂ ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದು ಹೊಂದಾಣಿಕೆ ಮಾಡಿಕೊಳ್ಳುವವರ ಕಾಲ” ಎಂದು ಲೇವಡಿ ಮಾಡಿದರು.

”ಬಿ.ವೈ.ವಿಜಯೇಂದ್ರರನ್ನು ಅಳೆದು, ತೂಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ” ಎಂದು ಅರವಿಂದ ಲಿಂಬಾವಳಿ ತಮ್ಮ ಅಸಮಾಧಾನ ಹೊರಹಾಕಿದರು.

ರಾಜಕಾರಣ ಯಾವುದೇ ಮನೆತನಕ್ಕೆ ಸೀಮಿತವಲ್ಲ, ನಾಟಕ ಕಂಪನಿ ಅಲ್ಲ: ವಿ.ಸೋಮಣ್ಣ

ಅರವಿಂದ್ ಲಿಂಬಾವಳಿ ಅವರು ಅಸಮಾಧಾನ ಹೊರಹಾಕಿದ ಬಳಿಕ ಬಿಜೆಪಿ ಮುಖಂಡ ವಿ.ಸೋಮಣ್ಣ ಕೂಡ ಅವರ ಆರೋಪಗಳಿಗೆರ ಧ್ವನಿಗೂಡಿಸಿದ್ದಾರೆ.

”ಪಕ್ಷದ ಹೈಕಮಾಂಡ್ ಸೂಚನೆಯಂತೆ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ನನಗೆ ಯಾವ ರೀತಿಯ ಹೊಡೆತ ಬಿದ್ದಿತು ಎಂಬುದನ್ನು ಡಿ.6ರ ನಂತರ ಬಿಡಿ, ಬಿಡಿಯಾಗಿ ವಿವರಿಸುತ್ತೇನೆ” ಎಂದು ವಿ.ಸೋಮಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ”ನಮ್ಮ ಪಕ್ಷದಲ್ಲಿನ ಬೆಳವಣಿಗೆಗಳು ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆಯಂತಾಗಿದೆ” ಎಂದು ವಿಶ್ಲೇಷಿಸಿದರು.

ವಿವಿಧ ಪಕ್ಷಗಳೊಂದಿಗೆ ವಿಜಯೇಂದ್ರ ಹಾಗೂ ಅಶೋಕ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರವಿಂದ ಲಿಂಬಾವಳಿ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅವರ ಮಾತಿಗೆ ನನ್ನ ಸಮ್ಮತಿ ಇದೆ. ಮುಂದೆ ಮನಸ್ಸಿನ ಭಾವನೆಗಳನ್ನೆಲ್ಲಾ ಹೇಳಿಕೊಳ್ಳುತ್ತೇನೆ” ಎಂದಿದ್ದಾರೆ.

”ರಾಜಕಾರಣ ದೊಂಬರಾಟ ಅಲ್ಲ. ಯಾವುದೇ ಮನೆತನಕ್ಕೆ ಸೀಮಿತವಲ್ಲ. ನಾಟಕ ಕಂಪನಿ ಅಲ್ಲ. ಒಳ ಒಪ್ಪಂದಕ್ಕೆ ಸೀಮಿತವಲ್ಲ” ಎಂದು ಮಾರ್ಮಿಕವಾಗಿ ಹೇಳಿದರು.

ಬಿ.ಎಸ್. ಯಡಿಯೂರಪ್ಪ ನಿಮ್ಮನ್ನು ಸಂಪರ್ಕಿಸಿದ್ದಾರೆಯೇ ಎಂಬ ಪ್ರಶ್ನೆಗೆ, ”ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕಿಸಿಲ್ಲ. ಆ ರೀತಿಯ ಪ್ರಯತ್ನವಾಗಿಲ್ಲ” ಎಂದು ಉತ್ತರಿಸಿದರು.

ಇದನ್ನೂ ಓದಿ: ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...