Homeಮುಖಪುಟಪಕ್ಷ ವಿರೋಧ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ

ಪಕ್ಷ ವಿರೋಧ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ

- Advertisement -
- Advertisement -

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ಇದು ಮುಂದುವರಿದರೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿ “ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋತಿದೆ ಎಂದು ಕೆಲವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ, ಪಕ್ಷದ ವಿರುದ್ಧ ಹೇಳಿಕೆ ನೀಡಿರುವ ಆಡಿಯೋ ವಿಡಿಯೋ ಮುಂದಿಟ್ಟುಕೊಂಡು ಸಭೆ ಮಾಡಲಾಗಿದೆ. ಪಕ್ಷದ ವಿರುದ್ಧ ಹೇಳಿಕೆ ನೀಡಿದವರನ್ನು ಸಭೆಗೆ ಕರೆಯಲಾಗಿತ್ತು. 11 ಜನ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಭೆಗೆ 11 ಜನರಿಗೂ ಕರೆದಿದ್ವಿ, ಅದರಲ್ಲಿ 5 ಜನ ಸಭೆಗೆ ಬಂದಿಲ್ಲ” ಎಂದರು.

ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ‌ ಶಾಸಕ‌ರಾದ ಗೋವಿಂದ ಕಾರಜೋಳ, ಎ ಎಸ್ ಪಾಟೀಲ್ ‌ನಡಹಳ್ಳಿ, ವೀರಣ್ಣ ಚರಂತಿಮಠ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಆದರೆ ಪ್ರಭು ಚವ್ಹಾಣ್, ಮುರುಗೇಶ ನಿರಾಣಿ, ಈಶ್ವರ್ ಸಿಂಗ್ ಠಾಕೂರ್, ರಮೇಶ್ ಜಿಗಜಿಣಗಿ, ರೇಣುಕಾಚಾರ್ಯ ಇಂದಿನ ಸಭೆ ಮುಂದೆ ಬಂದಿಲ್ಲ. ಈ ವಾರದಲ್ಲಿ ಬಂದು ವಿವರಣೆ ಕೊಡ್ತೀವಿ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

ಪಕ್ಷದ ಸೋಲಿನ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕೆಲವು ನಾಯಕರನ್ನು ಒಟ್ಟಿಗೆ ಕರೆದು ಮಾತನಾಡಲಾಗುತ್ತಿದೆ. ಕೆಲವು ನಾಯಕರು ಸೋಲಿನಿಂದ ವಿಚಲಿತರಾಗಿದ್ದಾರೆ. ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಏನೇ ಹೇಳಿಕೆ ಇದ್ದರೂ ಅವರೆಲ್ಲರೂ ಪಕ್ಷದ ವೇದಿಕೆಯಲ್ಲಿ ಹೇಳಬೇಕು ಹೊರತು ಹೀಗೆ ಮಾಧ್ಯಮಗಳ ಮುಂದೆ ಬಂದು ಹೇಳುವುದು ಸರಿಯಲ್ಲ. ಸಾವಿರಾರು ಜನ ಬಿಜೆಪಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಈ ಬಗ್ಗೆ ಪಕ್ಷ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯರವರು ಮೂರು ದಿನದಿಂದ ಬಿಜೆಪಿ ಸೋಲಿಗೆ ನಮ್ಮ ಪಕ್ಷದ ಮುಖಂಡರೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಲ್ಲದೇ ತಾನೂ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...