Homeಕರ್ನಾಟಕಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆಯೇ ಎಂಬ ಶ್ನೆಗೆ ಸಿಎಂ ಉತ್ತರಿಸಿದರು.

ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ: ಸಿದ್ದರಾಮಯ್ಯ  ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದಿದ್ದರು ಎಂಬ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1,600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಬಿಜೆಪಿಯವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವುದು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಸಿಎಂ, “ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ” ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಸಿಎಂ ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ” ಎಂದರು.

‘ಹಿಂದೂಗಳು ನಮಗಾಗಿ ಮತ ಹಾಕಿದರೆ ಅದು ವಂಚನೆಯೇ?’: ಮಹಾದೇವಪುರದಲ್ಲಿ ಮತ ಕಳ್ಳತನ ಆರೋಪಕ್ಕೆ ಸಂಸದ ಪಿ.ಸಿ. ಮೋಹನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...