Homeಚಳವಳಿಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

'ತಳಸ್ತರದವರ ಅಭಿವೃದ್ದಿ ಮತ್ತು ಏಳಿಗೆಗಾಗಿ ದುಡಿದ' ಆರು ಹೋರಾಟಗಾರರಿಗೆ ಬೋಧಿವೃಕ್ಷ ಮತ್ತು ಬೋಧಿವರ್ಧನ ಪ್ರಶಸ್ತಿ ನೀಡಲಾಗುತ್ತಿದೆ.

- Advertisement -
- Advertisement -

ದ್ವೇಷ – ಅಸೂಯೆಗಳನ್ನು ಮೀರೋಣ, ಶಾಂತಿ ಸಾಮರಸ್ಯದ ದೇಶ ಕಟ್ಟೋಣ ಎಂಬ ಕರೆಯೊಂದಿಗೆ 2022ರ ಅಂಬೇಡ್ಕರ್ ಹಬ್ಬವನ್ನು ಆಚರಿಸಲು ಸ್ಫೂರ್ತಿಧಾಮ ಸಂಸ್ಥೆ ನಿರ್ಧರಿಸಿದೆ. ಏಪ್ರಿಲ್ 14 ರಂದು ಬೆಂಗಳೂರಿನ ಮಾಗಡಿ ರಸ್ತೆಯ ಅಂಜನಾನಗರದ ಸ್ಫೂರ್ತಿಧಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ತಳಸ್ತರದವರ ಅಭಿವೃದ್ದಿ ಮತ್ತು ಏಳಿಗೆಗಾಗಿ ದುಡಿದ’ ಆರು ಹೋರಾಟಗಾರರಿಗೆ ಬೋಧಿವೃಕ್ಷ ಮತ್ತು ಬೋಧಿವರ್ಧನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಗುರುವಾರ ನಡೆಯುವ ಅಂಬೇಡ್ಕರ್ ಹಬ್ಬದಲ್ಲಿ ಬೆಳಿಗ್ಗೆಯಿಂದಲೂ ಪ್ರೀತಿ-ಸಹಬಾಳ್ವೆಯನ್ನು ಎತ್ತಿ ಹಿಡಿಯುವ ಹಾಡು, ಕುಣಿತ, ಕಾವ್ಯ ವಾಚನ, ಚಿತ್ರಕಲೆ ಮತ್ತು ವಿಚಾರ ವಿನಿಮಯ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದು, ಸ್ಪೂರ್ತಿಧಾಮದ ಅಧ್ಯಕ್ಷರಾದ ಎಸ್.ಮರಿಸ್ವಾಮಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಮೂರ್ತಿ ವಿ.ಗೋಪಾಲಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಹೋರಾಟಗಾರರಾದ ಜಿ.ರಾಮಕೃಷ್ಣರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೋದಿವೃಕ್ಷ ಪ್ರಶಸ್ತಿಗೆ ಆಯ್ಕೆಯಾದ ಡಾ.ಆರ್.ಎಸ್ ಪ್ರವೀಣ್ ಕುಮಾರ್

ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಅಲ್ಲಂಪುರ ಗ್ರಾಮದವರಾದ ಡಾ.ಆರ್.ಎಸ್ ಪ್ರವೀಣ್ ಕುಮಾರ್‌ರವರು ಐಪಿಎಸ್ ಅಧಿಕಾರಿಯಾಗಿದ್ದರು. ತಮ್ಮ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಸಂಪೂರ್ಣ ಸಮಯವನ್ನು ತಳಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ಮೆಲ್ದರ್ಜೆಗೇರಿಸುವುದು, ಕೂಲಿಕಾರರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತೆಲಂಗಾಣ ರಾಜ್ಯಾದ್ಯಂತ ಬಹುಜನ ಯಾತ್ರೆ ನಡೆಸುತ್ತಾ ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಗಾಗಿ ದುಡಿಯುತ್ತಿದ್ದಾರೆ. ಇವರು ಈ ಬಾರಿಯ ಸ್ಪೂರ್ತಿಧಾಮ ನೀಡುವ ಬೋದಿವೃಕ್ಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೋದಿವರ್ಧನ ಪ್ರಶಸ್ತಿಗೆ ಆಯ್ಕೆಯಾದವರು

ಸ್ಪೂರ್ತಿಧಾಮ ಸಂಸ್ಥೆಯು ಐವರು ಹೋರಾಟಗಾರರಿಗೆ ಬೋದಿವರ್ಧನ ಪ್ರಶಸ್ತಿ ನೀಡುತ್ತಿದೆ. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಂಡ್ಯದ ಗುರುಪ್ರಸಾದ್ ಕೆರಗೋಡುರವರು, ರಾಜ್ಯಾದ್ಯಂತ ಆಶಾ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಬಳ್ಳಾರಿಯ AIMSS ಸಂಘಟನೆಯ ಡಿ.ನಾಗಲಕ್ಷ್ಮಿಯವರು, ಯುವಜನರಲ್ಲಿ ಬುದ್ದ ಧರ್ಮದ ಅರಿವು ಮೂಡಿಸುತ್ತಿರುವ ಕೋಲಾರದ ಪದ್ಮಾಲಯ ನಾಗರಾಜ್‌ರವರು, ಆದಿವಾಸಿಗಳ ಹಕ್ಕುಗಳಿಗಾಗಿ ಹಲವು ದಶಕಗಳಿಂದ ಹೋರಾಡುತ್ತಿರುವ ಉತ್ತರ ಕನ್ನಡದ ಡಾ.ಬಿ.ಪಿ ಮಹೇಂದ್ರ ಕುಮಾರ್‌ರವರು ಮತ್ತು ದಾದಿಯಾಗಿ ಬಡಜನರ ಸೇವೆಗೈಯುತ್ತಿರುವ ಮೈಸೂರಿನ ಮೇರಿ ಲೋಬೋರವರು ಬೋದಿವರ್ಧನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೋಧಿವೃಕ್ಷ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದರೆ, ಬೋದಿವರ್ಧನ ಪ್ರಶಸ್ತಿಗಳು ತಲಾ 25 ಸಾವಿರು ರೂ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....