ಏಪ್ರಿಲ್ 17 ರಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಸಮೀಕ್ಷೆ ವರದಿಯ ಕುರಿತ ಚರ್ಚೆಯ ನಂತರವೇ ಅದರ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅಲ್ಲಿಯವರೆಗೆ ಅದಕ್ಕೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆಯೂ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 17ರ ಸಚಿವ
“ಈವೊಂದು ವಿಷಯವನ್ನು ಮಾತ್ರ ಚರ್ಚಿಸಲು ನಾವು ಏಪ್ರಿಲ್ 17 ರಂದು ಸಚಿವ ಸಂಪುಟ ಸಭೆ ಕರೆದಿದ್ದೇವೆ. ಅಲ್ಲಿ ನಾವು ಚರ್ಚಿಸುತ್ತೇವೆ. ಚರ್ಚೆಯ ನಂತರ, ನಾನು (ವಿಷಯದ ಕುರಿತು) ಮಾತನಾಡುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನದ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್ 11 ರಂದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಸಂಕ್ಷಿಪ್ತವಾಗಿ ‘ಜಾತಿ ಸಮೀಕ್ಷೆ’ಯನ್ನು ಮಂಡಿಸಲಾಗಿತ್ತು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಅದರ ಅಂದಿನ ಅಧ್ಯಕ್ಷ ಎಚ್. ಕಾಂತರಾಜು ಅವರ ನೇತೃತ್ವದಲ್ಲಿ ಜಾತಿ ಜನಗಣತಿ ವರದಿಯನ್ನು ಸಿದ್ಧಪಡಿಸುವ ಕಾರ್ಯವನ್ನು ವಹಿಸಲಾಗಿತ್ತು. 2018ರಲ್ಲಿ ಸಿದ್ದರಾಮಯ್ಯ ಅವರ ಮೊದಲ ಮುಖ್ಯಮಂತ್ರಿ ಅವಧಿಯ ಅಂತ್ಯದ ವೇಳೆಗೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿತ್ತು ಮತ್ತು 2024ರ ಫೆಬ್ರವರಿಯಲ್ಲಿ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ವರದಿಯನ್ನು ಅಂತಿಮಗೊಳಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರನ್ನು ಸೋಲಿಸಿತು ಎಂಬ ಬಿಜೆಪಿಯ ಆರೋಪವನ್ನು ಸಿದ್ದರಾಮಯ್ಯ ಅವರು ಆಧಾರರಹಿತ ಎಂದು ಕರೆದಿದ್ದಾರೆ. ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಶ್ರೀಪಾದ ಅಮೃತ್ ಡಾಂಗೆ ತನ್ನ ಸೋಲಿಗೆ ಕಾರಣ ಎಂದು ಅಂಬೇಡ್ಕರ್ ಪತ್ರ ಬರೆದಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬಿಜೆಪಿ ಪಕ್ಷವು ಮಹಾತ್ಮ ಗಾಂಧಿ, ಅಂಬೇಡ್ಕರ್ ಮತ್ತು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿದ್ದ, ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದವರೆ ಅವರನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಭಾರತ ಸಂವಿಧಾನವನ್ನು ವಿರೋಧಿಸಿದ ‘ಮನುವಾದಿಗಳು’ ಅವರನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಏಪ್ರಿಲ್ 17ರ ಸಚಿವ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!
ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

